Belagavi NewsBelgaum NewsKannada NewsKarnataka NewsNationalPolitics

ಅಗ್ನೀವೀರ ನೇಮಕಾತಿ ರ್ಯಾಲಿ ಆ.8 ರಿಂದ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಗ್ನವೀರ ನೇಮಕಾತಿ ರ‌್ಯಾಲಿಯು ಆಗಸ್ಟ್ 8ರಿಂದ 25 ರವರೆಗೆ ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಮೈದಾನದಲ್ಲಿ ನಡೆಯಲಿದೆ.

ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರ ಮತ್ತು ಯಾದಗಿರಿ ಜಿಲ್ಲೆಗಳ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

Home add -Advt

ಈಗಾಗಲೇ ನಡೆದಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು www.joinindianarmy.nic.in ಪ್ರಕಟಿಸಲಾಗಿದ್ದು, ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಈಗಾಗಲೇ ಪ್ರವೇಶಪತ್ರ ಕಳಿಸಲಾಗಿರುತ್ತದೆ.

ಪ್ರವೇಶಪತ್ರದಲ್ಲಿ ತಿಳಿಸಿರುವ ನಿಗದಿತ ದಿನಾಂಕಗಳಂದು ಅಭ್ಯರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಬಹುದು. 

ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಅರ್ಹತೆ/ಸಾಧನೆ ಆಧರಿಸಿ ರ್ಯಾಲಿಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಈ ಆಯ್ಕೆ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಯಾವುದೇ ಮಧ್ಯವರ್ತಿಗಳ ಆಸೆ-ಆಮಿಷಗಳಿಗೆ ಮೋಸ ಹೋಗಬಾರದು.‌ಅಭ್ಯರ್ಥಿಗಳ ಅರ್ಹತೆ ಮತ್ತು ಕ್ಷಮತೆ ಆಧಾರದ ಮೇಲೆ ಅಂತಿಮ ಆಯ್ಕೆ ನಡೆಯಲಿದೆ ಎಂದು ಅಗ್ನಿವೀರ ನೇಮಕಾತಿ ವಿಭಾಗದ ನಿರ್ದೇಶಕರಾದ ಕರ್ನಲ್ ಎ.ಕೆ.ಉಪಾಧ್ಯಾಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button