Latest

ಅದೃಷ್ಟವನ್ನೇ ನಂಬಿಕೊಂಡಿರಬೇಡಿ -ವಿದ್ಯಾರ್ಥಿಗಳಿಗೆ ಕೊಡ್ಲಿ ಕರೆ

   ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿಯ ನಾಯ್ಕರ ಶಿಕ್ಷಣ ಸಂಸ್ಥೆಯ ರವೀಂದ್ರನಾಥ ಠಾಗೋರ ಪದವಿ-ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ದಲ್ಲಿ ೨೦೧೮-೧೯ ನೇ ಸಾಲಿನ ವಾರ್ಷಿಕ ದಿನಾಚರಣೆ ಮತ್ತು ಪಾರಿತೋಷಕ ವಿತರಣಾ ಸಮಾರಂಭ ನಡೆಯಿತು.

ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ವಿಯಜಪುರದ ಆಹಾರ ಮತ್ತು ನಾಗರಿಕ ಪೊರೈಕೆ ಇಲಾಖೆ ಜಂಟಿ ನಿರ್ದೇಶಕ ಚನ್ನಬಸ್ಸಪ್ಪಾ ವಿ. ಕೊಡ್ಲಿ ಆಗಮಿಸಿದ್ದರು. ವಿದ್ಯಾರ್ಥಿಗಳಿಗೆ ಪಿಯುಸಿ ಹಂತವು ಭವಿಷ್ಯವನ್ನು ನಿರ್ಧರಿಸುವ, ಬದುಕನ್ನು ಕಟ್ಟಿಕೊಳ್ಳುವ ಸುವರ್ಣ ಅವಕಾಶ. ವಿಶ್ವಾಸ ಮತ್ತು ಶ್ರಮ ನಿಮ್ಮ ಕನಸನ್ನು ನನಸಾಗಿಸುತ್ತದೆ. ಸತತ ಪ್ರಯತ್ನದಿಂದಲೇ ಯಶಸ್ಸು ಸಿಗುವುದು ಹೊರತು ಅದೃಷ್ಟವನ್ನೆ ಅವಲಂಬಿಸಿ ಇರಲಾಗದು. ಶೈಕ್ಷಣಿಕವಾಗಿ ಸಾಧನೆ ಮಾಡಿದಾಗ ಉತ್ತಮ ಭವಿಷ್ಯ ನಿರ್ಮಾಣವಾಗುತ್ತದೆ. ಎಂದು ಕರೆ ನೀಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರವೀಂದ್ರನಾಥ ಠಾಗೋರ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸಿ.ಎನ್.ನಾಯ್ಕರ ಮಾತನಾಡುತ್ತಾ, ಉತ್ತಮ ಪಾಲಕರು ಮತ್ತು ಶಿಕ್ಷಕರಿಂದ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣವಾಗುತ್ತದೆ. ಭವಿಷ್ಯದ ಗುರಿ, ಧ್ಯೇಯೋದ್ದೇಶಗಳನ್ನು ತಲುಪಲು ಸಮಸ್ಯೆಗಳು ಬಂದರೆ ಅವುಗಳನ್ನು ಧೈರ್ಯದಿಂದ ಎದುರಿಸಬೇಕು. ಜೀವನದಲ್ಲಿ ಸಕಾರಾತ್ಮಕವಾಗಿ ವಿಚಾರಮಾಡಿ ಶ್ರಮಿಸಿದಾಗ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದರು.

Home add -Advt

ವೇದಿಕೆಯ ಮೇಲೆ ನಾಯ್ಕರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ವೇತಾ ಸಿ. ನಾಯ್ಕರ ಉಪಸ್ಥಿತರಿದ್ದರು. ಸುಧಾ ಅಂಗಡಿ ಸ್ವಾಗತಿಸಿದರು. ಉಮೇಶ ಸುಲ್ತಾನಪುರಿ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಗುಡ್ ಶೆಪರ್ಡ ಮಹಾವಿದ್ಯಾಲಯದ ಪ್ರಾಚಾರ್ಯರಾದ ಎಮ್.ಎಮ್. ಮುಲ್ತಾನಿ ವರದಿ ವಾಚನ ಮಾಡಿದರು. ಸುಪ್ರಿಯಾ ಸಿದ್ನಾಳ ವಂದಿಸಿದರು. ದೀಪಾ ಕಾರ್ಯಕ್ರಮ ನಿರೂಪಿಸಿದರು. 

೨೦೧೮-೧೯ ನೇ ಸಾಲಿನ ಅತ್ಯುತ್ತಮ ವಿದ್ಯಾರ್ಥಿ ಎಂದು ಯಶ ಗೋಧೆ ಮತ್ತು ಅತ್ಯುತ್ತಮ ವಿದ್ಯಾರ್ಥಿನಿ ಎಂದು ಸಹನಾ ಕೊಚ್ಚರಗಿ ಅವರನ್ನು ಘೋಷಿಸಲಾಯಿತು.

Related Articles

Back to top button