ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ್ದು ಸಂತೋಷ ತಂದಿದ್ದು, ನನಗೆ ಏನಾದರೂ ಕೀರ್ತಿ ಬಂದಿದ್ದರೆ ಅದಕ್ಕೆ ಜಿಲ್ಲೆಯ ಜನತೆಯ ಸಹಕಾರವೇ ಕಾರಣ ಎಂದು ಜಿಲ್ಲಾ ಪಂಚಾಯತ್ ನಿಕಟಪೂರ್ವ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಬಾಗಲಕೋಟೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿರುವ ರಾಮಚಂದ್ರನ್ ಆರ್. ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳಿಂದ ಏರ್ಪಡಿಸಲಾದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕಳೆದ 2 ವರ್ಷದಿಂದ ವಿವಿಧ ಇಲಾಖೆಗಳ ಸಿಬ್ಬಂದಿಯೊಂದಿಗೆ ಬೆರೆತು ಕಾರ್ಯನಿರ್ವಹಿಸಿದ್ದು ಅತ್ಯಂತ ಸಂತೋಷವನ್ನುಂಟು ಮಾಡಿದೆ. ಇಲ್ಲಿನ ಜಿಲ್ಲಾ ಪಂಚಾಯಿತಿಯಲ್ಲಿ ಲೆಕ್ಕಾಚಾರ ಮತ್ತು ಕಡತ ವಿಲೇವಾರಿ ವ್ಯವಸ್ಥೆ ತುಂಬಾ ಚೆನ್ನಾಗಿದ್ದ ಕಾರಣ ಇಲ್ಲಿ ಕೆಲಸ ಮಾಡಲು ಸಾಕಷ್ಟು ಸಹಕಾರಿಯಾಯಿತು. ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೇ ದೊಡ್ಡ ಜಿಲ್ಲೆಯಾಗಿದ್ದು ಜಿಲ್ಲೆಯನ್ನು ಅರಿತು ಅಭಿವೃದ್ಧಿ ಪಥದಲ್ಲಿ ಸಾಗಿಸಲು ಎರಡು ವರ್ಷ ಸಾಕಾಗದು. ನಾನು ಏನಾದರೂ ಅಭಿವೃದ್ಧಿ ಕಾರ್ಯ ಮಾಡಿದ್ದರೆ ಅದಕ್ಕೆ ನಾನು ಮಾತ್ರ ಕಾರಣನಲ್ಲ. ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಜನರ ಸಹಕಾರದಿಂದ ಕೆಲಸ ಮಾಡಲು ಸಾಧ್ಯವಾಗಿದೆ ಎಂದರು.
ಜಿಪಂ ಅಧ್ಯಕ್ಷೆ ಆಶಾ ಐಹೊಳೆ, ಅಪರ ಜಿಲ್ಲಾಧಿಕಾರಿ ಬೂದೆಪ್ಪ ಎಚ್.ಬಿ., ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ