ಪ್ರಗತಿವಾಹಿನಿ ಸುದ್ದಿ, ಶಿರಸಿ:
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಬೆಂಬಲಿಗರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶಿರಸಿಯ ಚಿಪಗಿಯಲ್ಲಿರುವ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಆರ್.ವಿ.ಹೆಗಡೆ ಚಿಪಗಿ ಹಾಗೂ ನಗರದ ಕೆ.ಎಚ್.ಬಿ ಕಾಲೋನಿಯಲ್ಲಿರುವ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ
ಕೃಷ್ಣ ಎಸಳೆ ಎನ್ನುವವರ ಮನೆ ಮೇಲೆ ಐಟಿ ದಾಳಿ ನಡೆದಿದೆ.
ಗೋವಾ ಹಾಗೂ ಹುಬ್ಬಳ್ಳಿಯಿಂದ ಆಗಮಿಸಿದ ಹದಿನೈದಕ್ಕೂ ಹೆಚ್ಚಿನ ಐಟಿ ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ ನಡೆದಿದ್ದು, ಚುನಾವಣಾ ವಿಚಕ್ಷಣಾದಳದ ಸಹಕಾರದೊಂದಿಗೆ ಅಧಿಕಾರಿಗಳು ಮನೆಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ