Latest

ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಾಗಾರ

ಪ್ರಗತಿವಾಹಿನಿ ಸುದ್ದಿ, ಬೈಲಹೊಂಗಲ

2019-19ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬೈಲಹೊಂಗಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ  ಹಾಗೂ ಸಣ್ಣವೀರಪ್ಪ ಚನ್ನಬಸಪ್ಪ ಹೊಂಗಲ ಪ್ರತಿಷ್ಠಾನ ಗೋವನಕೊಪ್ಪ ಇವರ ಶ್ರಯದಲ್ಲಿ ಉಚಿತವಾಗಿ ಪುನಶ್ಚೇತನ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಬೈಲಹೊಂಗಲದ ಶಾಸಕರ ಮಾದರಿ ಶಾಲೆ ನಂ. 4 ರಲ್ಲಿ ಮೇ 18ರಿಂದ 15 ದಿನಗಳ ಕಾರ್ಯಾಗಾರ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಾರ್ವತಿ ವಸ್ತ್ರದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಪ್ರತಿಷ್ಠಾನದ ಸಂಸ್ಥಾಪಕ ಮಹಾಂತೇಶ ಹೊಂಗಲ ಅವರನ್ನು (ಫೋ -9980677115) ಸಂಪರ್ಕಿಸಬಹುದು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button