Latest

ಯಡಿಯೂರಪ್ಪ ಅವಧಿಯ 10 ಹುದ್ದೆಗಳು ರದ್ದು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ 10 ಹುದ್ದೆಗಳನ್ನು ರದ್ದುಪಡಿಸಲಾಗಿದೆ.

ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿಗಳಾಗಿದ್ದ ರೇಣುಕಾಚಾರ್ಯ, ಡಿ.ಎನ್.ಜೀವರಾಜ್, ಎನ್.ಆರ್.ಸಂತೋಷ್ ಅವರ ಹುದ್ದೆ ರದ್ದುಪಡಿಸಲಾಗಿದೆ.

Home add -Advt

ಅಲ್ಲದೇ ಶಿಕ್ಷಣ ಸುಧಾರಣಾ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್, ಯಡಿಯೂರಪ್ಪ ಕಾನೂನು ಸಲಹೆಗಾರರಾಗಿದ್ದ ಮೋಹನ್ ಲಿಂಬಿಕಾಯಿ, ಮಾಧ್ಯಮ ಸಲಹೆಗಾರ ಎನ್.ಭೃಂಗೇಶ್, ಸಿಎಂ ಇ-ಆಡಳಿತ ಸಲಹೆಗಾರ ಬೇಳೂರು ಸುದರ್ಶನ್, ಮಾಧ್ಯಮ ಸಂಯೋಜಕ ಜಿ.ಎಸ್.ಸುನೀಲ್, ಸಿಎಂ ನೀತಿ ನಿರೂಪಣೆ ಕಾರ್ಯತಂತ್ರ ಸಲಹೆಗಾರ ಪ್ರಶಾಂತ್ ಸೇರಿದಂತೆ ಒಟ್ಟು 10 ಹುದ್ದೆಗಳನ್ನು ರದ್ದುಗೊಳಿಸಿ ಡಿಪಿಎಆರ್ ನಿಂದ ಅಧಿಸೂಚನೆ ಹೊರಡಿಸಲಾಗಿದೆ.

ಸಂಪುಟ ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್; ನಾಳೆ ಸಂಜೆ ಪ್ರಮಾಣವಚನ?

Related Articles

Back to top button