Latest

ಆಂಗ್ಲಮಾಧ್ಯಮ ಶಾಲೆ ಆರಂಭಕ್ಕೆ ಸಾಹಿತ್ಯ ಸಮ್ಮೇಳನ ವಿರೋಧ

 

    ಪ್ರಗತಿವಾಹಿನಿ ಸುದ್ದಿ, ಧಾರವಾಡ

ಆಂಗ್ಲಮಾಧ್ಯಮ ಶಾಲೆ ಆರಂಭಿಸುವ ರಾಜ್ಯ ಸರಕಾರದ ನಿರ್ಧಾರಕ್ಕೆ ವಿರೋಧ ಸೇರಿದಂತೆ, ಧಾರವಾಡದಲ್ಲಿ ಭಾನುವಾರ ಮುಕ್ತಾಯಗೊಂಡ 84ನೇ ಕನ್ನಡ ಸಾಹಿತ್ಯ ಸಮ್ಮೇಳನ 4 ನಿರ್ಣಯಗಳನ್ನು ಅಂಗೀಕರಿಸಿದೆ.

ನಾಡಗೀತೆ ಹಾಡುವ ನಿಮಿಷವನ್ನು ಗರಿಷ್ಠ 2 ನಿಮಿಷ 30 ಸೆಕೆಂಡ್‌ಗಳಿಗೆ ನಿಗದಿಗೊಳಿಸಬೇಕು.  ಆಂಗ್ಲ ಮಾಧ್ಯಮ ಶಾಲೆ ಆರಂಭಿಸುವ ರಾಜ್ಯ ಸರ್ಕಾರದ ನಿರ್ಣಯವನ್ನು ಅನುಷ್ಠಾನ ಮಾಡ ಬಾರದು.  ಕೇಂದ್ರ ಸರ್ಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಎಲ್‌ಕೆಜಿ, ಯುಕೆಜಿ ಸಹಿತ 7ನೇ ತರಗತಿವರೆಗೆ ರಾಷ್ಟ್ರೀಕರಣಗೊಳಿಸಿ ಪ್ರಾಥಮಿಕ ಶಿಕ್ಷಣವನ್ನು ರಾಷ್ಟ್ರೀಕರಣಗೊಳಿಸಬೇಕು ಎಂದು ಒತ್ತಾಯಿಸುವ ನಿರ್ಣಯ ಅಂಗೀಕರಿಸಲಾಗಿದೆ. 

85ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಲಬುರ್ಗಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button