ಪ್ರಗತಿವಾಹಿನಿ ಸುದ್ದಿ, ಮೂಡಲಗಿ
ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದ ಕಾರ್ತಿಕೋತ್ಸವ ಅಂಗವಾಗಿ ನಡೆದ ಜಾತ್ರೆಯಲ್ಲಿ ಆಕಸ್ಮಿಕ ಗುಂಡು ಹಾರಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ.
ಗ್ರಾಮದ ನಿಜಗುಣಿ ಮಹಾರುದ್ರಪ್ಪ ಅಂಗಡಿ (47) ಮೃತ ವ್ಯಕ್ತಿ. ಬುಧವಾರ ಬೆಳಗ್ಗೆ ಗ್ರಾಮದ ರಂಗೇಶ್ವರ ದೇವಸ್ಥಾನ ಬಳಿ ನಡೆಯುತ್ತಿದ್ದ ಪಲ್ಲಕ್ಕಿ ಉತ್ಸವ ಸಂದರ್ಭದಲ್ಲಿ ಅದೇ ಗ್ರಾಮದ ಮಹಾದೇವ ಭೀಮಪ್ಪ ನಾಡಗೌಡ ಎನ್ನುವವರ ರಿವಾಲ್ವರ್‌ನಿಂದ ಆಕಸ್ಮಿಕವಾಗಿ ಗುಂಡು ಹಾರಿದೆ. ಗುಂಡು ತಗುಲಿದ ನಿಜಗುಣಿ ಸ್ಥಳದಲ್ಲೆ ಮೃತ ಪಟ್ಟಿದ್ದಾರೆ.
ಲೈಸೆನ್ಸ್ ಹೊಂದಿದ ರಿವಾಲ್ವರ್‌ನಿಂದ ಗುಂಡು ಹಾರಿದ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಕುಲಗೋಡ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.