Latest

ಆದಿವಾಸಿಗಳ ಸಮಸ್ಯೆ ಬಗೆಹರಿಸಲು ಆದಿವಾಸಿ ಪ್ರದೇಶಗಳಿಗೆ ಶೀಘ್ರ ಭೇಟಿ : ಮುಖ್ಯಮಂತ್ರಿ

   ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ರಾಜ್ಯದಲ್ಲಿ ನೆಲೆಸಿರುವ  ಆದಿವಾಸಿಗಳ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದ್ದು, ಶೀಘ್ರ ದಲ್ಲಿಯೇ ಶಿವಮೊಗ್ಗ, ದಕ್ಷಿಣ ಕನ್ನಡ,  ಕೊಡಗು, ಚಾಮರಾಜನಗರ ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ  ಮುಖ್ಯಮಂತ್ರಿ ಹೆ ಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. 
ತ್ರಿಪುರ ಸಂಸದರು ಹಾಗೂ ಆದಿವಾಸಿ ರಾಷ್ಟ್ರೀಯ ಮಂಚ್ ನ ರಾಷ್ಟ್ರೀಯ ಸಂಚಾಲಕರಾದ ಜಿತೇಂದ್ರ ಚೌಧರಿ ನೇತೃತ್ವದಲ್ಲಿ ಆದಿವಾಸಿ ಸಮನ್ವಯ ಸಮಿತಿಯು ಶುಕ್ರವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ ಆದಿವಾಸಿಗಳ ಸಮಸ್ಯೆಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.  
ಅರಣ್ಯ ಹಕ್ಕುಗಳ ಕಾಯ್ದೆ 2006 ಅಂಗೀಕಾರವಾಗಿ 12 ವರ್ಷಗಳು ಕಳೆದಿದ್ದರೂ, ಬಹುತೇಕ ಆದಿವಾಸಿಗಳಿಗೆ ಭೂಮಿಯ ಹಕ್ಕು ಪಡೆಯುವಲ್ಲಿ ಇರುವ ಗೊಂದಲಗಳ ನಿವಾರಣೆ, ಶಿಕ್ಷಣ, ಉದ್ಯೋಗ ಸೇರಿದಂತೆ ಇತರ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸಲು ಸಕಾರಾತ್ಮಕವಾಗಿ ತೀರ್ಮಾನ ಕೈಗೊಳ್ಳಲು ಕಂದಾಯ, ಅರಣ್ಯ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗುವುದು ಎಂದರು.
 ಆದಿವಾಸಿ ಸಮನ್ವಯ ಸಮಿತಿಯ ಸಂಚಾಲಕ ವೈ.ಕೆ.ಗಣೇಶ್,  ಸಹಸಂಚಾಲಕ ಎಸ್. ವೈ.ಗುರುಶಾಂತ್, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು  ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button