ಪ್ರಗತಿವಾಹಿನಿ ಸುದ್ದಿ, ನವದೆಹಲಿ
ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲಾತಿ ಕಲ್ಪಿಸಲು ಕೇಂದ್ರ ಸರಕಾರ ನಿರ್ಧರಿಸಿದೆ.
ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವಸಂಪುಟ ಸಭೆ ಈ ನಿರ್ಧಾರ ತೆಗೆದುಕೊಂಡಿದೆ. ಪ್ರಸ್ತುತ ನಡೆಯುತ್ತಿರುವ ಸಂಸತ್ ಅಧಿವೇಶನವನ್ನು ಇನ್ನೂ 2 ದಿನ ವಿಸ್ತರಿಸಿ ಈ ಸಂಬಂಧ ಮಸೂದೆ ಮಂಡಿಸಿ ಅಂಗೀಕಾರ ಪಡೆಯಲು ಕೇಂದ್ರ ಸರಕಾರ ನಿರ್ಧರಿಸಿದೆ.
ವಾರ್ಷಿಕ 8 ಲಕ್ಷ ರೂ.ಗಿಂತ ಕಡಿಮೆ ಆದಾಯವಿರುವ ಮೇಲ್ವರ್ಗದವರಿಗೆ ಈ ಮೀಸಲಾತಿ ಅನ್ವಯವಾಗಲಿದ್ದು, ಒಟ್ಟಾರೆ ಮೀಸಲಾತಿ ಪ್ರಮಾಣ ಶೇ.49ರಿಂದ 59ಕ್ಕೆ ಹೆಚ್ಚಿದಂತಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ