*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಭೇಟಿ ನೀಡಿ ವಿಷಾಹಾರ ಸೇವನೆಯಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವವರ ಯೋಗಕ್ಷೇಮ ವಿಚಾರಿಸಿದರು. ಅಸ್ವಸ್ಥರಿಗೆ ನೀಡುತ್ತಿರುವ ಚಿಕಿತ್ಸಾ ಸೌಲಭ್ಯದ ಬಗ್ಗೆ ಅವರು ವೈದ್ಯರಿಂದ ಮಾಹಿತಿ ಪಡೆದರು.
ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವ ಪುಟ್ಟರಂಗ ಶೆಟ್ಟಿ, ಸಂಸದ ಧ್ರುವ ನಾರಾಯಣ, ಹನೂರು ಶಾಸಕ ನರೇಂದ್ರ, ಮಾಜಿ ಸಂಸದರಾದ ವಿಜಯ ಶಂಕರ್, ಮಾಜಿ ಶಾಸಕರಾದ ಮಂಜುನಾಥ, ಸೋಮಶೇಖರ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ