ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ತುಮಕೂರಿನ ಸಿದ್ದಗಂಗಾಮಠದ ಶಿವಕುಮಾರ ಸ್ವಾಮಿಗಳ ಆರೋಗ್ಯ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಹಿರೆಕೆರೂರು ಪ್ರವಾಸ ರದ್ಧುಪಡಿಸಿ ತುಮಕೂರಿಗೆ ಹೊರಟಿದ್ದಾರೆ.
ಬೆಳಗ್ಗೆ ತುಮಕೂರಿನ ಕಿರಿಯ ಶ್ರೀಗಳ ಆರೋಗ್ಯ ವಿಚಾರಿಸಿದ ಸಿಎಂ ಕುಮಾರಸ್ವಾಮಿ, ನಂತರ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ತೆರಳಲು ನಿರ್ಧರಿಸಿದರು.
ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಈಗಾಗಲೆ ಮಠಕ್ಕೆ ತಲುಪಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ತಮ್ಮ ಇಂದಿನ ಕಾರ್ಯಕ್ರಮಗಳನ್ನೆಲ್ಲ ರದ್ಧು ಮಾಡಿ ಈಗಾಗಲೆ ತುಮಕೂರು ತಲುಪಿದ್ದಾರೆ. ಮಠದತ್ತ ಭಕ್ತರ ದಂಡು ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ.
ಸ್ವಾಮೀಜಿಗಳ ಆರೋಗ್ಯದ ಕುರಿತು ವೈದ್ಯರು ತಪಾಸಣೆ ನಡೆಸುತ್ತಿದ್ದು, ಸ್ವಲ್ಪ ಹೊತ್ತಿನಲ್ಲಿ ಹೆಲ್ತ್ ಬುಲಿಟೆನ್ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ಮಧ್ಯೆ ಚೆನ್ನೈನ ರೇಲಾ ಆಸ್ಪತ್ರೆಯ ವೈದ್ಯರನ್ನು ಕರೆಸುವ ಚಿಂತನೆಯೂ ನಡೆಯುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ