Latest

ಬಿಟ್ ಕಾಯಿನ್ ಹಗರಣ; ಸಿಎಂ ಗೆ ಪ್ರಧಾನಿ ಮೋದಿ ಹೇಳಿದ್ದೇನು?

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣದ ಚರ್ಚೆ ನಡೆದಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಿಎಂ ಬಸವರಾಜ್ ಬೊಮ್ಮಾಯಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.

ಪ್ರಧಾನಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಭೇಟಿ ವೇಳೆ ಬಿಟ್ ಕಾಯಿನ್ ಹಗರಣದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ನಾನಾಗಿಯೇ ಬಿಟ್ ಕಾಯಿನ್ ವಿಚಾರವನ್ನು ಪ್ರಸ್ತಾಪಿಸಲು ಮುಂದಾದೆ. ಆದರೆ ಪ್ರಧಾನಿ ಮೋದಿ ಈ ಬಗ್ಗೆ ತಲೆಕೆಡಿಸಿಕೊಳ್ಳುವುದು ಬೇಡ ಎಂದು ತಡೆದರು. ಬಿಟ್ ಕಾಯಿನ್ ವಿಚಾರದ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ. ನಿಮ್ಮ ಕೆಲಸಗಳನ್ನು ದಿಟ್ಟತನದಿಂದ ಮುಂದುವರೆಸಿ ಎಂದು ಸೂಚಿಸಿದರು ಎಂದರು.

ಡಿಸೆಬರ್ ನಲ್ಲಿ ಬೆಂಗಳೂರಿಗೆ ಬರುವಂತೆ ಹೇಳಿದ್ದೇನೆ. 4 ಕಾರ್ಯಕ್ರಮಗಳಿಗೆ ಬರಲು ಆಹ್ವಾನ ನೀಡಿದ್ದೇನೆ. ರಾಜ್ಯದ ರಾಜಕೀಯ ವಿದ್ಯಮಾನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾಗಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಬಿಟ್ ಕಾಯಿನ್ ಚರ್ಚೆ ಬೆನ್ನಲ್ಲೇ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ

Home add -Advt

Related Articles

Back to top button