ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಲೋಕಸಭಾ ಚುನಾವಣೆಯ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಇಂದು ಮತ್ತೊಮ್ಮೆ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆ ಆರಂವಾದ ದಿನ ಸ್ಥಳೀಯ ನಾಯಕರ ಜೊತೆ ತೆರಳಿ ನಾಮಪತ್ರ ಸಲ್ಲಿಸಿದ್ದರು.
ಇಂದು ಮಾಜಿಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸೇರಿದಂತೆ ರಾಜ್ಯ ಹಾಗೂ ಸ್ಥಳೀಯ ಮುಖಂಡರ ಜೊತೆ ಮೆರವಣಿಗೆಯ ಮೂಲಕ ತೆರಳಿ ನಾಮಪತ್ರ ಸಲ್ಲಿಸುವರು.
ನಾರ್ವೇಕರ್ ಗಲ್ಲಿಯ ಪಕ್ಷದ ಚುನಾವಣೆ ಕಚೇರಿಯಿಂದ ಮೆರವಣಿಗೆ ಹೊರಟು ಸಮಾದೇವಿ ಮಂದಿರದಲ್ಲಿ ಪೂಜೆ ಸಲ್ಲಿಸಿ ಖಡೇಬಜಾರ, ಶನಿವಾರ ಕೂಟ, ಚನ್ನಮ್ಮ ದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವರು.