ಪ್ರಗತಿವಾಹಿನಿ ಸುದ್ದಿ, ನವದೆಹಲಿ
ಉದ್ಯಮಿ ವಿಜಯ ಮಲ್ಯ ಈಗ ‘ದೇಶಭ್ರಷ್ಟ ಆರ್ಥಿಕ ಅಪರಾಧಿ’.
ವಿಶೇಷ ಪಿಎಂಎಲ್ ಎ ನ್ಯಾಯಾಲಯ ಮಲ್ಯ ಅವರನ್ನು ಆರ್ಥಿಕ ಅಪರಾಧಿ ಎಂದು ಘೋಷಿಸಿದೆ. ಭಾರತದ ವಿವಿಧ ಬ್ಯಾಂಕುಗಳಲ್ಲಿ ಸಾವಿರಾರು ಕೋಟಿ ಸಾಲ ಮಾಡಿ, ಲಂಡನ್ನಿಗೆ ಪರಾರಿಯಾಗಿರುವ ವಿಜಯ ಮಲ್ಯ ಅವರನ್ನು ಆರ್ಥಿಕ ಅಪರಾಧಿ ಎಂದು ಘೋಷಿಸಲು ಜಾರಿ ನಿರ್ದೇಶನಾಲಯ ಕೋರಿತ್ತು. ಅರ್ಜಿಯ ವಿಚಾರಣೆಯನ್ನು ವಿಶೇಷ ಪಿಎಂಎಲ್ ಎ ನ್ಯಾಯಾಲಯ ನಡೆಸಿತು. ಪ್ರಿವೆನ್ಷನ್ ಆಫ್ ಮನಿ ಲ್ಯಾಂಡರಿಂಗ್ ಕಾಯ್ದೆ ಪ್ರಕಾರ ಈಗ ಸರ್ಕಾರಕ್ಕೆ ಮಲ್ಯ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಾಧ್ಯವಿದೆ.
ಮಲ್ಯ ಒಡೆತನದ 12.5 ಸಾವಿರ ಕೋಟಿ ರು ಅಸ್ತಿ ಜಪ್ತಿ ಮಾಡಲು ತನಿಖಾ ಸಂಸ್ಥೆಗಳು ಮುಂದಾಗಿವೆ. ತಮ್ಮನ್ನು ಆರ್ಥಿಕ ಅಪರಾಧಿ ಎಂದುಜಾರಿ ನಿರ್ದೇಶನಾಲಯವು ಕರೆದು, ದೋಷರೋಪಣ ಸಲ್ಲಿಸಲು ಮುಂದಾಗಿರುವುದಕ್ಕೆ ತಡೆ ನೀಡುವಂತೆ ಕೋರಿ ಮಲ್ಯ ಕೋರ್ಟಿಗೆ ಕಳೆದ ವಾರ ಹಾಕಿದ್ದ ಅರ್ಜಿ ಕೂಡಾ ತಿರಸ್ಕೃತಗೊಂಡಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ