Latest

ಎನ್ ಪಿಎಸ್ ನೌಕರರ ಪ್ರತಿಭಟನೆ

 

       ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

Related Articles

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಎನ್ ಪಿಎಸ್ ರದ್ದುಗೊಳಿಸಲು ನಿರ್ಣಯ ಕೈಗೊಂಡು ಹಳೇಯ ಪಿಂಚಣಿಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿ ಎನ್ ಪಿಎಸ್ ನೌಕರರು ಮಂಗಳವಾರ ಹಿರೇಬಾಗೇವಾಡಿಯಿಂದ  ಸುವರ್ಣ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಿ, ಧರಣಿ ನಡೆಸಿದರು. 

ರಾಜ್ಯದ ವಿವಿಧೆಡೆಯಿಂದ ಬಂದ ಸಾವಿರಾರು ನೌಕರರು ಸರಕಾರದ ವಿರುದ್ಧ ಮತ್ತು ಎನ್ ಪಿಎಸ್ ರದ್ಧುಗೊಳಿಸಬೇಕೆಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಕುಮಾರಸ್ವಾಮಿ ಚುನಾವಣೆಗೆ ಮುನ್ನ ತಮ್ಮ ಸರಕಾರ ಬಂದರೆ ಎನ್ ಪಿಎಸ್ ರದ್ಧುಗೊಳಿಸುವುದಾಗಿ ಭರವಸೆ ನೀಡಿದ್ದರು. ಜೆಡಿಎಸ್ ಪ್ರಣಾಳಿಕೆಯಲ್ಲೂ ಈ ಘೋಷಣೆ ಮಾಡಲಾಗಿತ್ತು. ಆದರೆ ಈಗ ಈ ಭರವಸೆಯನ್ನು ಮರೆತಿದ್ದಾರೆ ಎಂದು ನೌಕರರು ಆಕ್ರೋಶ ವ್ಯಕ್ತಪಡಿಸಿದರು. 

Home add -Advt

ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. 

Related Articles

Back to top button