ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಏ.10 ರಂದು ಬೆಳಗ್ಗೆ 10 ಗಂಟೆಗೆ ಮತದಾನ ಜಾಗೃತಿ ಜಾಥಾ ಆಯೋಜಿಸಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಲಸಿಕಾ ಸಂಸ್ಥೆ ಆವರಣ ಟಿಳಕವಾಡಿಯಿಂದ ಆರಂಭವಾಗಲಿರುವ ಜಾಥಾ 2ನೇ ರೇಲ್ವೆ ಗೇಟ್ ಮುಖಾಂತರ ಟಿಳಕವಾಡಿ ಪ್ರದೇಶದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸವೇಶ್ವರ ವೃತ್ತ (ಗೋವಾವೇಸ್) ಮೂಲಕ ನಾಥ ಪೈ ಸರ್ಕಲ್ನಲ್ಲಿ ಕೊನೆಗೊಳ್ಳಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ