*
ಪ್ರಗತಿವಾಹಿನಿ ಸುದ್ದಿ, ಹೈದರಾಬಾದ್
ತೆಲಂಗಾಣ ರಾಜ್ಯದ ಪೊಲೀಸ್ ಅಕಾಡೆಮಿ ಉಪ ನಿರ್ದೇಶಕರಾಗಿದ್ದ ಮಧುಕರ ಶೆಟ್ಟಿ ( ೪೭) ಅವರು ಹೈದರಾಬಾದ್ ನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಕಳೆದ ಕೆಲ ದಿನಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಉಡುಪಿ ಮೂಲದ ಮಧಕರ ಶೆಟ್ಟಿ ಅವರು ಖ್ಯಾತ ಪತ್ರಕರ್ತ ದಿ. ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಪುತ್ರ. ಮಧುಕರ ಅವರು ಲೋಕಾಯುಕ್ತ ಮತ್ತು ಚಿಕ್ಕಮಗಳೂರು ಎಸ್ ಪಿ ಯಾಗಿ ಉತ್ತಮ ಕಾರ್ಯನಿರ್ವಹಣೆ ಮೂಲಕ ಜನರ ಮೆಚ್ಚುಗೆ ಗಳಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ