Kannada NewsKarnataka NewsLatest

ಯಡಿಯೂರಪ್ಪ ಬೆಳಗಾವಿ ಪ್ರವಾಸ ಪಟ್ಟಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಳಗಾವಿ ಪ್ರವಾಸ ಪಟ್ಟಿ ಪ್ರಕಟವಾಗಿದೆ.

ಶುಕ್ರವಾರ ನಡೆಯಲಿರುವ ಬಿಜೆಪಿ ಕೋರ್ ಕಮಿಟಿ ಸಭೆ ಮತ್ತು ಶನಿವಾರ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಆಗಮಿಸಲಿದ್ದಾರೆ.

Home add -Advt

ಶುಕ್ರವಾರ ಮಧ್ಯಾಹ್ನ 3.40ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಯಡಿಯೂರಪ್ಪ, ರಾತ್ರಿ 7.30ಕ್ಕೆ ಯು.ಕೆ.27 ಹೊಟೆಲ್ ನಲ್ಲಿ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸುವರು.

ಅಂದು ಬೆಳಗಾವಿಯಲ್ಲೇ ವಾಸ್ತವ್ಯ ಮಾಡಲಿರುವ ಯಡಿಯೂರಪ್ಪ ಶನಿವಾರ ಬೆಳಗ್ಗೆ 10 ಗಂಟೆಯಿಂದ ಗಾಂಧಿ ಭವನದಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳುವರು.

ರಾತ್ರಿ 7.30ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.

 

Related Articles

Back to top button