Latest

ಕಡೋಲಿಯಲ್ಲಿ ಶಿವಾಜಿ ಮಹಾರಾಜರ ಅಶ್ವರೂಡ ಪ್ರತಿಮೆ ಲೋಕಾರ್ಪಣೆ.

ಪ್ರಗತಿವಾಹಿನಿ ಸುದ್ದಿ, ಅಗಸಗಿ

ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ಜಿಲ್ಲೆಯಲ್ಲೆ ಅತಿ ದೊಡ್ಡದಾದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಯನ್ನು ಲೋಕಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಡೋಲಿ ಶ್ರೀ ದುರದುಂಡೀಶ್ವರ ವಿರಕ್ತಮಠದ ಶ್ರೀ ಗುರುಬಸವಲಿಂಗ ಸ್ವಾಮೀಜೀ, ಮಹಾರಾಷ್ಟ್ರ ರಾಷ್ಟ್ರವಾದಿ ಕಾಂಗ್ರೆಸ್ ಮುಖ್ಯಸ್ಥ ,ಸಂಸದ ಹಾಗೂ ಮಾಜಿ ಕೇಂದ್ರ ಮಂತ್ರಿ ಶರದ ಪವಾರ , ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಅರಣ್ಯ ಸಚಿವ ಸತೀಶ್ ಜಾರಕಿಹೊಳಿ , ಶಾಸಕಿ ಲಕ್ಷ್ಮೀ ಹೆಬ್ಬಾಳಕರ , ಅಂಜಲಿ ನಿಂಬಾಳಕರ , ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಅರುಣ ಕಟಾಂಬಳೆ, ಕಡೋಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜು ಮಾಯಣ್ಣಾ ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಪುತ್ಥಳಿ ಅನಾವರಣಗೋಳಿಸಿ ಲೋಕಾರ್ಪಣೆ ಮಾಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button