Latest

ಕಡ್ಡಾಯವಾಗಿ ಮತ ಚಲಾವಣೆ ಮಾಡಿ ; ಡಿಸಿ ಬೊಮ್ಮನಹಳ್ಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
18 ವರ್ಷ ಮೇಲ್ಪಟ್ಟ ಎಲ್ಲ ಮತದಾರರು ಮತಗಟ್ಟೆಗೆ ಹೋಗಿ ಕಡ್ಡಾಯವಾಗಿ ಮತ ಚಲಾಯಿಸಬೇಕೆಂದು ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಕರೆ ನೀಡಿದರು.
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮಾ.೮ ರಂದು ಬೆಳಗ್ಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಿಂದ ಬಸವೇಶ್ವರ ವೃತ್ತದವರೆಗೆ (ಗೋವಾವೇಸ್) ಹಮ್ಮಿಕೊಳ್ಳಲಾದ ಸೈಕಲ್ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಪಂ ಸಿಇಒ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಿ.ಎಚ್. ಸುಧೀರಕುಮಾರ ರೆಡ್ಡಿ, ಜಿಪಂ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಸೀಬಿರಂಗಯ್ಯ, ಜಿಪಂ ಅಕ್ಷರದಾಸೋಹ ಯೋಜನೆ ಶಿಕ್ಷಣಾಧಿಕಾರಿ ಬಸವರಾಜ ಮಿಲ್ಲಾನಟ್ಟಿ, ಸರಕಾರಿ ಬಿ.ಎಡ್. ಕಾಲೇಜಿನ ಉಪನ್ಯಾಸಕ  ರವಿ ಭಜಂತ್ರಿ, ಡಯೆಟ್ ಪ್ರಾಂಶುಪಾಲ ರವಿ ಬಳಗಾರ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related Articles

Back to top button