Karnataka NewsLatestPolitics

*ಹಾಸನ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಆರ್.ಅಶೋಕ್ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಹಾಸನದಲ್ಲಿ ಸಂಭವಿಸಿದ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ಹಾಸನಕ್ಕೆ ಭೇಟಿ ನೀಡಿರುವ ವಿಪಕ್ಷ ನಾಯಕ ಆರ್.ಅಶೋಕ್ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಸರ್ಕಾರ ಘೋಷಿಸಿರುವ ಪರಿಹಾರವನ್ನು ಹೆಚ್ಚಿಸುವಂತೆ ಆಗ್ರಹಿಸಿದರು.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಹಾಸನದ ಮೊಸಳೆ ಹೊಸಳ್ಳಿಯಲ್ಲಿ ನಡೆದ ದುರಂತಕ್ಕೆ ಸಂಬಂಧಿಸಿದಂತೆ ಸರ್ಕಾರ ಮೃತರಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದೆ. ಇದು ಬಡಕುಟುಂಬಗಳಿಗೆ ಯಾವುದಕ್ಕೂ ಸಾಲುವುದಿಲ್ಲ. ಆ ಕುಟುಂಬಗಳ ಸ್ಥಿತಿ ಶೋಚನೀಯವಾಗಿದೆ ಎಂದರು.

ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ 25 ಲಕ್ಷ ಪರಿಹಾರ ನೀಡಬೇಕು. ಕುಟುಂಬಗಳು ಮನೆಗೆ ಆಧಾರವಗಬೇಕಿದ್ದ ವಿದ್ಯಾರ್ಥಿ ಮಕ್ಕಳನ್ನು ಕಳೆದುಕೊಂಡಿದ್ದಾರೆ. ತೀರಾ ಬಡತನದಲ್ಲಿರುವ ಕುಟುಂಬಗಳಾಗಿವೆ. ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿ ಮಾನವೀಯತೆ ಮೆರೆಯಬೇಕು ಎಂದರು.

ಅಪಘಾತದಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು, ಬೆಂಗಳೂರು, ಮೈಸೂರಿಗೆ ಸ್ಥಳಾಂತರಿಸಿ ಸರ್ಕಾರ ಉತ್ತಮ ಚಿಕಿತ್ಸೆ ಕೊಡಿಸಲಿ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button