ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ
ಕರಾಳದಿನಾಚರಣೆಯಲ್ಲಿ ಪಾಲ್ಗೊಂಡು ಹಿನ್ನೆಲೆಯಲ್ಲಿ ನಿಪ್ಪಾಣಿ ನಗರಸಭೆಯ ಮೂವರು ಸದಸ್ಯರಿಗೆ ನೊಟೀಸ್ ಜಾರಿಗೊಳಿಸಲಾಗಿದೆ.
ಕಳೆದ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಈ ನಗರಸಭೆ ಸದಸ್ಯರು ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು ನಾಡದ್ರೋಹವೆಸಗಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿ, ಸದಸ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿತ್ತು. ವಿನಾಯಕ ವಡೆ, ಜಯವಂತ ಭಾಟ್ಲೆ, ರಾಜು ಗುಂದೇಶಾ ಅವರಿಗೆ ನೋಟೀಸ್ ನೀಡಲಾಗಿತದ್ದು, ಜ.23ರಂದು ನಿಪ್ಪಾಣಿ ಉಪವಿಭಾಗಾಧಿಕಾರಿ ಕಚೇರಿಗೆ ಹಾಜರಾಗುವಂತೆ ತಿಳಿಸಲಾಗಿದೆ.