Latest

ಕರ್ನಾಟಕ ರಾಜ್ಯ ಕ್ರೀಡಾ ನೀತಿ ವಿಶ್ವವಿದ್ಯಾಲಯಗಳಲ್ಲಿಯೂ ಅನುಷ್ಠಾನ : ಜಿ.ಟಿ.ದೇವೇಗೌಡ



      ಪ್ರಗತಿವಾಹಿನಿ ಸುದ್ದಿ, ಸುವರ್ಣ ವಿಧಾನ ಸೌಧ, ಬೆಳಗಾವಿ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪ್ರಕಟಿಸಲಾಗಿರುವ ಕರ್ನಾಟಕ ರಾಜ್ಯ ಕ್ರೀಡಾ ನೀತಿಯನ್ನು ಉನ್ನತ ಶಿಕ್ಷಣ ಇಲಾಖೆಯ ಅಧೀನದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಅನುಷ್ಠಾನಗೊಳಿಸಲು ಮಾರ್ಗಸೂಚಿಗಳನ್ನು ಶಿಫಾರಸ್ಸು ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಹೇಳಿದರು.
ವಿಧಾನ ಪರಿಷತ್ತಿನಲ್ಲಿಂದು ಸದಸ್ಯ ಐವಾನ್ ಡಿಸೋಜಾ ಅವರು ನಿಯಮ ೭೨ ರಡಿ ನೀಡಿದ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು ಪ್ರಸ್ತುತ ಉನ್ನತ ಶಿಕ್ಷಣ ಇಲಾಖೆಯ ಅಧೀನದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ , ಅಂತರ್ ಕಾಲೇಜು, ಅಂತರ್ ವಿಶ್ವವಿದ್ಯಾಲಯಗಳಲ್ಲಿ ಕ್ರೀಡಾಕೂಟಗಳನ್ನು ಏರ್ಪಡಿಸಲು ಕ್ರಮ ಕೈಗೊಳ್ಳಲಾಗಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಕೂಟಗಳಿಗೆ ವಿಶ್ವವಿದ್ಯಾಲಯಗಳಿಂದ ಭಾಗವಹಿಸಲು ಕ್ರೀಡಾಪಟುಗಳಿಗೆ ಅನುಮತಿ ನೀಡಲಾಗುತ್ತಿದೆ. ವಿಜಯಿಯಾದ ಆಟಗಾರರನ್ನು ಸನ್ಮಾನಿಸಲಾಗುತ್ತಿದೆ.
ಒಲಿಂಪಿಕ್ ಪದಕ ವಿಜೇತರಿಗೆ ಗ್ರೂಪ್ ’ಎ’ ಹುದ್ದೆಗಳು, ಏಷ್ಯನ್ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ವಿಜೇತರಾದವರಿಗೆ ಗ್ರೂಪ್ ’ಬಿ’ ಹುದ್ದೆಗಳನ್ನು ನೀಡಲು ವಿಶೇಷ ನೇಮಕಾತಿ ನಿಯಮಗಳನ್ನು ರೂಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button