Latest

ಯಾವ ಶಾಸಕರೂ ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ ಎಂದ ಕಟೀಲ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಲವು ಹಿರಿಯರಿಗೆ ಸಚಿವ ಸ್ಥಾನ ಕೈತಪ್ಪಿದ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಂತ್ರಿ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ಸಹಜ. ಆದರೆ ಯಾರೂ ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ ಎಂದು ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಕಟೀಲ್, ಸಚಿವ ಸಂಪುಟದಲ್ಲಿ ಸ್ಥಾನ ಸಿಗದಿರುವವರಿಗೆ ಅಸಮಾಧಾನ ಇರುತ್ತೆ. ಅವರನ್ನು ಕರೆದು ಸಮಾಧಾನಪಡಿಸುವ ಯತ್ನ ನಡೆಸುತ್ತೇವೆ. ಯಾವ ಶಾಸಕರೂ ರಾಜೀನಾಮೆ ನಿರ್ಧಾರಕ್ಕೆ ಬರುವ ಪ್ರಶ್ನೆ ಉದ್ಭವಿಸಲ್ಲ ಎಂದರು.

ಹಿರಿಯರನ್ನು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ತೀರ್ಮಾನ ಕೈಗೊಳ್ಳಲಾಗಿದೆ. ಮುಂದಿನ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

29 ನೂತನ ಸಚಿವರಿಂದ ಪ್ರಮಾಣವಚನ ಸ್ವೀಕಾರ

Home add -Advt

Related Articles

Back to top button