Latest

*ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ್ ನಿಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮತ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ಕಾಕಾಸಾಹೇಬ್ ಪಾಟೀಲ್ (71) ಅವರು ಇಂದು ನಿಧನ ಹೊಂದಿದ್ದಾರೆ.

ಕಳೆದ ಕೆಲ ದಿನಗಳಿಂದ ಅನಾರೊಗ್ಯದ ಕಾರಣ ನಗರದ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.‌ ಆದರೆ ಚಿಕಿತ್ಸೆ ‌ಫಲಕಾರಿ ಆಗದೇ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. 

Home add -Advt

ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ನಿಪ್ಪಾಣಿಯ ಮಾಜಿ ಶಾಸಕ ಕಾಕಾಸಾಹೇಬ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಾಕಾಸಾಹೇಬ ಪಾಟೀಲ ಒಬ್ಬ ನಿಷ್ಠಾವಂತ ಕಾಂಗ್ರೆಸ್ಸಿಗರಾಗಿದ್ದರು. ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಸಾಕಷ್ಟು ಕೆಲಸ ಮಾಡಿದ್ದರು. ಶಾಸಕತ್ವ ಮುಗಿದ ಮೇಲೆಯೂ ನಿರಂತರವಾಗಿ ಜನರ ಜೊತೆ ಸಂಪರ್ಕ ಇಟ್ಟುಕೊಂಡು ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದರು ಎಂದಿದ್ದಾರೆ.
ಕ್ಷೇತ್ರದಲ್ಲಿ ಸಾಕಷ್ಟು ಕಾರ್ಯಕರ್ತರನ್ನು ಅವರು ಬೆಳೆಸಿದ್ದರು. ಕ್ಷೇತ್ರದ ಜನರ ಅಪಾರ ಪ್ರೀತಿಗೆ ಪಾತ್ರರಾಗಿದ್ದರು. ಅವರ ಅಗಲುವಿಕೆ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಬೆಳಗಾವಿ ಜಿಲ್ಲೆಗೆ ಸಾಕಷ್ಟು ನಷ್ಟವನ್ನುಂಟು ಮಾಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ ಮಿಡಿದಿದ್ದಾರೆ.

Related Articles

Back to top button