ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಸ್ಥಾನ ಹೊಂದಾಣಿಕೆ ಅಂತಿಮವಾಗಿದೆ.
ಕಾಂಗ್ರೆಸ್ 20ರಲ್ಲಿ ಹಾಗೂ ಜೆಡಿಎಸ್ 8 ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿವೆ.
ಜೆಡಿಎಸ್ ಹಾಸನ, ಮಂಡ್ಯ, ಉತ್ತರ ಕನ್ನಡ, ಶಿವಮೊಗ್ಗ, ವಿಜಯಪುರ, ಬೆಂಗಳೂರು ಉತ್ತರ, ಶಿವಮೊಗ್ಗ ಹಾಗೂ ತುಮಕೂರಿನಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.
ಉಳಿದ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿದೆ.
ಹಾಸನದಲ್ಲಿ ಪ್ರಜ್ವಲ್ ರೇವಣ್ಣ, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ಉತ್ತರದಲ್ಲಿ ಎಚ್.ಡಿ.ದೇವೆಗೌಡ, ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಕಣಕ್ಕಿಳಿಯುವರು.
ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯಾಗಬೇಕಿದೆ.