ಪ್ರಗತಿವಾಹಿನಿ ಸುದ್ದಿ, ಕಾರವಾರ
ಕಾಣೆಯಾದ 7 ಜನ ಮೀನುಗಾರರ ಹುಡುಕಿಕೊಡಿ ಎಂದು ಮಲ್ಪೆಯಲ್ಲಿ ನಡೆಯುತ್ತಿರುವ ಬ್ರಹತ್ ಪ್ರತಿಭಟನೆಗೆ ಬೆಂಬಲ ಸೂಚಿಸಿ ಕಾರವಾರದ ಬೈತಖೊಲ್ ಬಂದರಿನಲ್ಲಿ ಸಹ ಮೀನುಗಾರಿಕೆ ಸ್ಥಗಿತಗೊಳಿಸಿದ ಮೀನುಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ.
ಮೀನುಗಾರರ ನಾಪತ್ತೆ ಹಿನ್ನೆಲೆಯಲ್ಲಿ ಕಾರವಾರ ನಗರದ ಬೈತಖೊಲ್ ನಲ್ಲಿ ಸೇರಿದ ಮೀನುಗಾರರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ನಮಗೆ ನಿಮ್ಮ ಸಾಲಮನ್ನ, ಪುಕ್ಕಟೆ ಭಾಗ್ಯ ಏನೂ ಬೇಡ. ಕಾಣೆಯಾದವರನ್ನು ಹುಡುಕಿಕೊಡಿ ಎಂದು ಆಗ್ರಹಿಸಿದ್ದಾರೆ.
ಟೈರ್ ಗೆ ಬೆಂಕಿ ಹಚ್ಚಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಮೀನುಗಾರಿಕೆಯನ್ನೂ ಸ್ಥಗಿತಗೊಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ