Latest

ಕಾರಿನ ಸ್ಟೆಪ್ನಿಯಲ್ಲಿ 2 ಕೋಟಿ ಹಣ ಸಾಗಣೆ: ವೀಡಿಯೋ ಇಲ್ಲಿದೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು :

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶನಿವಾರ ವಿವಿಧೆಡೆ ದಾಳಿ ನಡೆಸಿ  4 ಕೋಟಿಗೂ ಅಧಿಕ ಹಣವನ್ನು ವಶಕ್ಕೆ ಪಡೆದಿದ್ದಾರೆ. ಕಾರಿನ ಸ್ಟೆಪ್ನಿಯಲ್ಲಿ ಸಾಗಿಸುತ್ತಿದ್ದ 2 ಕೋಟಿ ಹಣವನ್ನು ಸಹ ವಶಕ್ಕೆ ಪಡೆಯಲಾಗಿದೆ. ಕರ್ನಾಟಕ-ಗೋವಾ  ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ 4 ಕೋಟಿಗೂ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನಿಂದ ಶಿವಮೊಗ್ಗ ಮತ್ತು ಭದ್ರಾವತಿಗೆ ಹಣ ಸಾಗಣೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರನ್ನು ಪರಿಶೀಲನೆ ನಡೆಸಿದಾಗ ಕೋಟ್ಯಾಂತರ ರೂಪಾಯಿ ಹಣ ಪತ್ತೆಯಾಗಿದೆ. ಕಾರಿನ ಸ್ಟೆಪ್ನಿಯಲ್ಲಿ ಹಣವನ್ನು ತೆಗೆದುಕೊಂಡು ಹೋಗಲಾಗುತ್ತಿತ್ತು.

ಕಾರಿನ ಸ್ಟೆಪ್ನಿಯಿಂದ 2000 ರೂ.ಗಳ ನೋಟಿನ ಕಂತೆ-ಕಂತೆಯನ್ನು ತೆಗೆಯಲಾಗಿದೆ. ಈ ಟೈರ್‌ನಲ್ಲಿ 2.30 ಕೋಟಿ ಹಣವಿತ್ತು ಎಂದು ಐಟಿ ಇಲಾಖೆ ಹೇಳಿದೆ. ಭದ್ರಾವತಿಯಲ್ಲಿ ನಡೆಸಿದ ಮೊತ್ತೊಂದು ಕಾರ್ಯಾಚರಣೆಯಲ್ಲಿ 50 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ.

ಬಾಗಲಕೋಟೆಯ ನವನಗರದ ಮನೆಯೊಂದರ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು 1 ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ. ಬ್ಯಾಂಕ್ ಉದ್ಯೋಗಿ ತಮ್ಮ ಮನೆಯಲ್ಲಿ ಹಣವನ್ನು ಇಟ್ಟುಕೊಂಡಿದ್ದರು.

ವಿಜಯಪುರದಲ್ಲಿ ನಡೆಸಿದ ದಾಳಿಯ ವೇಳೆ 10 ಲಕ್ಷ ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ, ವಿಜಯಪುರ, ಬಾಗಲಕೋಟೆ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 23ರ ಮಂಗಳವಾರ ಚುನಾವಣೆ ನಡೆಯಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button