ಪ್ರಗತಿವಾಹಿನಿ ಸುದ್ದಿ, ಬೈಲಹೊಂಗಲ
ಬೈಲಹೊಂಗಲ ಹಾಗೂ ಆನಿಗೋಳ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯಾಹ್ನ ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚರಂತಯ್ಯ ಬಸಯ್ಯ ಹಿರೇಮಠ (65) ಮೃತಪಟ್ಟಿದ್ದಾರೆ.
ಜಮೀನಿಗೆ ತೆರಳಿ ಮನೆಗೆ ಆಗಮಿಸುತ್ತಿದ್ದ ಚರಂತಯ್ಯ ಹಿರೇಮಠ ಅವರಿಗೆ ಹಿಂಬದಿಯಿಂದ ಬಂದ ಕಾರ್ ಡಿಕ್ಕಿ ಹೊಡೆದಿದೆ. ಗಾಯಗೊಂಡ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಸಂಜೆ ಮೃತಪಟ್ಟಿದ್ದಾರೆ.
ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಪ್ರಗತಿವಾಹಿನಿ ಸುದ್ದಿಗಳನ್ನು ಇತರರಿಗೂ ಶೇರ್ ಮಾಡಿ)