ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ದಲಿತ ನಾಯಕ ಪರಮೇಶ್ವರ ಅವರಿಂದ ಗೃಹ ಇಲಾಖೆ ಕಿತ್ತುಕೊಂಡಿರುವ ಬಗ್ಗೆ ಜೆಡಿಎಸ್ ನಾಯಕ, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ನೀಡಿರುವ ಹೇಳಿಕೆಗೆ ಕಂದಾಯ ಸಚಿವ, ಕಾಂಗ್ರೆಸ್ ನಾಯಕ ಆರ್.ವಿ.ದೇಶಪಾಂಡೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
“ಕಾಂಗ್ರೆಸ್ ಪಕ್ಷವು ದಲಿತರೂ ಸೇರಿದಂತೆ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ನೀಡುತ್ತ ಬಂದಿದೆ. ಕಾಂಗ್ರೆಸ್ ಪಕ್ಷವನ್ನು ಟೀಕಿಸಿರುವ ರೇವಣ್ಣನವರು ತಮ್ಮ ಪಕ್ಷದಿಂದ ಎಷ್ಟು ಜನ ದಲಿತರನ್ನು ಮಂತ್ರಿಗಳನ್ನಾಗಿ ಮಾಡಿದ್ದಾರೆ?’’ ಎಂದು ಪ್ರಶ್ನಿಸಿದ್ದಾರೆ.
“ಕಾಂಗ್ರೆಸ್ ಪಕ್ಷವು ಸಮಾನತೆಯ ತತ್ವದಲ್ಲಿ ನಂಬಿಕೆ ಇಟ್ಟಿದೆ. ಹೀಗಾಗಿ ರೇವಣ್ಣನವರ ಮಾತು ಸತ್ಯಕ್ಕೆ ದೂರವಾದುದು,’’ ಎಂದು ದೇಶಪಾಂಡೆ ಪ್ರತಿಕ್ರಿಯಿಸಿದ್ದಾರೆ.
ದಲಿತ ಮುಖಂಡರಾದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಕಾಂಗ್ರೆಸ್ಸಿನವರೇ ತುಳಿಯುತ್ತಿದ್ದಾರೆ. ಅವರಿಂದ ಆ ಖಾತೆಯನ್ನು ಕಿತ್ತುಕೊಳ್ಳಬಾರದಿತ್ತು ಎಂದು ಎಚ್.ಡಿ.ರೇವಣ್ಣ ಹೇಳಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ