Latest

ಕೆಎಲ್ಇ ಆಸ್ಪತ್ರೆಗೆ ಶೃಂಗೇರಿ ಶ್ರೀ ಭೇಟಿ

 

 

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರಕ್ಕೆ ಶೃಂಗೇರಿ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಜಿ ಭೇಟಿ ನೀಡಿದರು.
ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಎಂ.ವಿ. ಜಾಲಿ ಆಸ್ಪತ್ರೆಯ ಕುರಿತು ವಿವರಿಸಿದರು.
ನಂತರ ಆಶೀರ್ವದಿಸಿದ ಅವರು, ಸತ್ಯ, ಪ್ರೇಮ, ನಿಸ್ವಾರ್ಥ ಸೇವೆ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಕೆಎಲ್‌ಇ ಸಂಸ್ಥೆ ಈ ಭಾಗದಲ್ಲಿ ಮಾಡಿರುವ ಕಾರ‍್ಯ ಜಗದಗಲಕ್ಕೂ ವಿಸ್ತರಿಸಿದೆ. ಡಾ. ಪ್ರಭಾಕರ ಕೋರೆ ಅವರ ಮುಂದಾಳತ್ವದಲ್ಲಿ ನಡೆಯುತ್ತಿರುವ ಸಂಸ್ಥೆ ವಿದ್ಯಾದಾನ ಮಾಡುವುದರ ಮೂಲಕ ಸಮಾಜದಲ್ಲಿನ ಅನಿಷ್ಠತೆಯನ್ನು ಹೋಗಲಾಡಿಸುತ್ತಿದೆ. ಅದರೊಂದಿಗೆ ವೈದ್ಯಕೀಯ ಸೇವೆ ನೀಡುತ್ತಿರುವುದು ಈ ಭಾಗದ ಜನರಿಗೆ ಅತ್ಯಂತ ಅನುಕೂಲವಾಗಿದೆ ಎಂದು ಶ್ಲಾಘಿಸಿದರು.
ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳಿಗೆ ಆಶೀರ್ವದಿಸಿ ಹಣ್ಣು ವಿತರಿಸಿದರು. ಈ ಸಂದರ್ಭದಲ್ಲಿ ಡಾ. ರಾಜಶೇಖರ ಸೋಮನಟ್ಟಿ, ವಿನಯ ಬೆದ್ರೆ, ರಾಜೀವ ಪಲ್ಲೇದ, ರವಿ ಸಂಕೇಶ್ವರಿ ಮುಂತಾದವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button