ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ
ಇದೇ ಶೈಕ್ಷಣಿಕ ವರ್ಷದಿಂದ ಕೆಎಲ್ಇ ವಿಶ್ವವಿದ್ಯಾಲಯ ಹೊಟೆಲ್ ಮ್ಯಾನೇಜ್ ಮೆಂಟ್ ಕೋರ್ಸ್ ಆರಂಭಿಸಲಿದೆ.
ವಿಶ್ವವಿದ್ಯಾಲಯದ ಕುಲಾಧಿಪತಿಯೂ ಆಗಿರುವ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಚಿಕ್ಕೋಡಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಕೆಎಲ್ಇ ಸಂಸ್ಥೆಯ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ಹೊಟೇಲ್ ನಿರ್ವಹಣೆ ಮತ್ತು ಅಡುಗೆ ತಂತ್ರಜ್ಞಾನ ಸಂಸ್ಥೆ ಪ್ರಾರಂಭಿಸಲಿದೆ. ಇದು ಉತ್ತರ ಕರ್ನಾಟಕದಲ್ಲೇ ವಿಶಿಷ್ಟವಾದ ಕೋರ್ಸ್ ಆಗಿದೆ ಎಂದರು.
ಭಾರತದಲ್ಲಿ ಹೊಟೆಲ್ ಮ್ಯಾನೇಜ್ ಮೆಂಟ್ ಆಗಿರುವ ಪದವೀಧರರ ಕೊರತೆ ಇದೆ. ಬೇಡಿಕೆ ಇದ್ದಷ್ಟು ಪರಿಣಿತರು ಸಿಗುತ್ತಿಲ್ಲ. ಈ ವಿಷಯವನ್ನು ಪರಿಗಣಿಸಿ ನೂತನ ಕೋರ್ಸ್ ಆರಂಭಿಸಲಾಗುತ್ತಿದೆ ಎಂದು ಅವರು ಹೇಳಿದರು.
ಕೋರ್ಸ್ 3 ವರ್ಷಗಳ ಅವಧಿಯದ್ದಾಗಿದ್ದು, ಪಿಯುಸಿ ಉತ್ತೀರ್ಣರಾದ ಯಾರೇ ಆದರೂ ಪ್ರವೇಶ ಪಡೆಯಬಹುದು ಎಂದು ಕೋರೆ ತಿಳಿಸಿದರು.
ಕೆಎಲ್ಇ ನಿರ್ದೇಶಕ ಮಹಾಂತೇಶ ಕವಟಗಿಮಠ ಹಾಗೂ ಸಿಎಲ್ಇ ಸಂಸ್ಥೆಯ ಕಾರ್ಯದರ್ಶಿ ಜಗದೀಶ ಕವಟಗಿಮಠ ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ