Latest

ಕೆ.ಎಸ್.ಆರ್.ಟಿ.ಸಿ.ಯಿಂದ ಸಿ.ಎಂ.ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 9.17 ಕೋಟಿ ರೂ. ಚೆಕ್ ಸಲ್ಲಿಕೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೆ.ಎಸ್.ಆರ್.ಟಿ.ಸಿ.ಯಿಂದ ಮಡಿಕೇರಿ ಪ್ರವಾಹ ಸಂತ್ರಸ್ಥರಿಗಾಗಿ ಸಂಗ್ರಹಿಸಲಾದ ಒಟ್ಟು 9.17 ಕೋಟಿ ರೂಗಳ ಚೆಕ್ಕನ್ನು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಇಂದು ತಮ್ಮ ಕಚೇರಿಯಲ್ಲಿ ಸ್ವೀಕರಿಸಿದರು.
ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ಅಧಿಕಾರಿ ಹಾಗೂ ಸಿಬ್ಬಂದಿಗಳ ಒಂದು ದಿನದ ಸಂಬಳದಿಂದ ಸಂಗ್ರಹವಾದ ಹಣವನ್ನು ಮಡಿಕೇರಿ ಸಂತ್ರಸ್ಥರ ನೆರವಿಗಾಗಿ ಸಲ್ಲಿಸಲಾಗಿದೆ.
ಈ ಸಂದರ್ಭದಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಶಾಸಕರಾದ ಶಿವಲಿಂಗೇಗೌಡ, ಸತ್ಯನಾರಾಯಣ, ಕೆ.ಎಸ್.ಆರ್.ಟಿ.ಸಿ. ಹಿರಿಯ ಅಧಿಕಾರಿಗಳಾದ ಬಸವರಾಜು, ಶಿವಯೋಗಿ ಕಳಸದ, ಎನ್.ವಿ.ಪ್ರಸಾದ ಉಪಸ್ಥಿತರಿದ್ದರು. ಇದೇ ವೇಳೆ ಕೆ.ಎಸ್.ಆರ್.ಟಿ.ಸಿ. ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯಿಂದ 17.81 ಲಕ್ಷ ರೂ.ಗಳ ಪರಿಹಾರ ನಿಧಿ ಚೆಕ್ ಸ್ವೀಕರಿಸಲಾಯಿತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button