
ಪ್ರಗತಿವಾಹಿನಿ ಸುದ್ದಿ; ಉಡುಪಿ: ಇಂದು ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬೆಳಗ್ಗೆ 10.30ಕ್ಕೆ ಹೈಕೋರ್ಟ್ ತೀರ್ಪು ನೀಡಲಿದೆ.
ಉಡುಪಿ ಜಿಲ್ಲೆಯ ಸರ್ಕಾರಿ ಕಾಲೇಜಿನಿಂದ ಆರಂಭವಾಗಿದ್ದ ವಿವಾದ ರಾಜ್ಯಾದ್ಯಂತ ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಮುಖವಾಗಿ ಉಡುಪಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಅಲ್ಲದೇ ಜಿಲ್ಲೆಯಲ್ಲಿ ಹೈ ಅಲರ್ಟ್ ಕೈಗೊಳ್ಳಲಾಗಿದ್ದು, 3 ಕೆ ಎಸ್ ಆರ್ ಪಿ, 5 ಡಿಎ ಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಶಾಲಾ-ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಮಾರ್ಚ್ 19ರವರೆಗೂ ದಕ್ಷಿಣ ಕನ್ನಡ ಹಾಗೂ ಮಂಗಳೂರಿನಲ್ಲಿ ನಿಷೇಧಾಜ್ಞೆ ಮುಂದುವರೆಯಲಿದೆ.
ರಾಜಧಾನಿ ಬೆಂಗಳೂರು, ದಾವಣಗೆರೆ, ರಾಮನಗರ, ಕೋಲಾರ ರಾಯಚೂರು, ಮಂಡ್ಯ, ಮೈಸೂರು, ಬೆಳಗಾವಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ 6 ದಿನಗಳ ಕಾಲ 144 ಸೆಕ್ಷನ್ ಜಾರಿಯಲ್ಲಿರಲಿದೆ ಎಂದು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಬೆಳಗ್ಗೆ ಬೆಳಗ್ಗೆ ಬಿಲ್ಡರ್ ಮರ್ಡರ್
ಬೆಳಗಾವಿ ಜಿಲ್ಲಾದ್ಯಂತ ಅನಿರ್ಧಿಷ್ಟಾವಧಿ ನಿಷೇಧಾಜ್ಞೆ; ಜಿಲ್ಲಾಧಿಕಾರಿ ಹಠಾತ್ ಆದೇಶ