Latest

ಗಂಡು ಮಗು ಕೊಟ್ಟು ಹೋದವನ್ಯಾರು?

  ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಜನವರಿ 11 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವೀಕ್ಷಣಾಲಯ ಆವರಣದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ಅಂದಾಜು 1 ವರ್ಷ 5 ತಿಂಗಳು ಗಂಡು ಮಗುವನ್ನು ಆವರಣದಲ್ಲಿ ಆಟ ಆಡುತ್ತಿದ್ದ ಬಾಲಕಿ ಒಬ್ಬಳಿಗೆ ತನ್ನ ಮಗುವನ್ನು ಎತ್ತಿಕೊ ನಾನು ಮರಳಿ ಬರುತ್ತೇನೆ ಎಂದು ಹೇಳಿ ಹೋದವನು ಮರಳಿ ಬಂದಿಲ್ಲ.
ಮಗುವಿನ ಪಾಲಕರು ಯಾರಾದರು ಇದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಾಜಿ ನಗರ, ವೀಕ್ಷಣಾಲಯ ಆವರಣ, ಬೆಳಗಾವಿ ದೂರವಾಣಿ-೦೮೩೧-೨೪೭೪೧೧೧ ಗೆ ಸಂಪರ್ಕಿಸಬೇಕೆಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು  ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button