Kannada NewsLatest

ಶನಿವಾರ ಬೆಳಗಾವಿಗೆ ಮುಖ್ಯಮಂತ್ರಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಬೆಳಗಾವಿಯಲ್ಲಿ ನಡೆಯುವ ಡಾ. ಪ್ರಭಾಕರ ಕೋರೆ ಅವರ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಶನಿವಾರ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಎಚ್ ಎ ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಿಎಂ ಬೊಮ್ಮಾಯಿ, ಮಧ್ಯಾಹ್ನ 2 ಗಂಟೆಗೆ ಬೆಳಗಾವಿಯ ನೆಹರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಡಾ‌. ಪ್ರಭಾಕರ ಕೋರೆ ಅವರ 75 ನೇ ಜನ್ಮ ದಿನದ ಅಮೃತ ಮಹೋತ್ಸವದಲ್ಲಿ ಪಾಲ್ಗೊಳ್ಳುವರು.

ಬಳಿಕ ಸಂಜೆ 4.30 ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಸಂಜೆ 5.45 ಕ್ಕೆ ಬೆಂಗಳೂರಿಗೆ ತಲುಪಲಿದ್ದಾರೆ ಎಂದು ಮುಖ್ಯ ಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಬಿ. ಪಿ. ಚನ್ನಬಸವೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಕೇಸ್; ತಕ್ಷಣ ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂ ನಿರಾಕರಣೆ

Home add -Advt

https://pragati.taskdun.com/politics/supreme-courthearingb-s-yedyurappa-caseafter-depavali/

Related Articles

Back to top button