ಪ್ರಗತಿವಾಹಿನಿ ಸುದ್ದಿ; ಮೈಸೂರು: ಇತ್ತೀಚೆಗೆ ತನ್ನ ಮೇಲೆ ನಡೆದಿದ್ದ ಹಲ್ಲೆ ವಿಚಾರವಾಗಿ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಶಾಸಕ ತನ್ವೀರ್ ಸೇಠ್, ನನ್ನ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯನ್ನ ಮಾತ್ರ ಪೊಲೀಸರು ಬಂಧಿಸಿದ್ದಾರೆ. ಆದರೆ ಈ ಪ್ರಕರಣದ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ದೂರಿದ್ದಾರೆ.
ನನ್ನ ಮೇಲೆ ಹಲ್ಲೆ ಮಾಡಿರುವ ಪ್ರಕರಣದಲ್ಲಿ ಸೂಕ್ತವಾಗಿ ತನಿಖೆ ನಡೆಯುತ್ತಿಲ್ಲ. ಈ ಪ್ರಕರಣವನ್ನು ನಾನು ಗಂಭೀರವಾಗಿ ಪರಿಗಣಿಸುತ್ತೇನೆ. ನನ್ನ ಮೇಲೆ ಹಲ್ಲೆ ಮಾಡಿದ ಉದ್ದೇಶವನ್ನು ಪತ್ತೆ ಮಾಡಬೇಕು. ಇದರ ಹಿಂದೆ ಯಾರು ಇದ್ದಾರೆ ಎಂದು ಪತ್ತೆ ಹಚ್ಚಿ ನನಗೆ ನ್ಯಾಯ ಒದಗಿಸಬೇಕೆಂದು ಎಂದು ಆಗ್ರಹಿಸಿದ್ದಾರೆ.
ಕಳೆದ ನವೆಂಬರ್ 18ರಂದು ರಾತ್ರಿ ಮೈಸೂರಿನ ಬನ್ನಿಮಂಟಪದಲ್ಲಿ ನೂರಾರು ಜನರ ಮುಂದೆಯೇ ಶಾಸಕ ತನ್ವೀರ್ ಸೇಠ್ ಮೇಲೆ ಕೊಲೆ ಯತ್ನ ನಡೆದಿತ್ತು. ಘಟನೆಯಲ್ಲಿ ಕುತ್ತಿಗೆ ಭಾಗಕ್ಕೆ ಮಚ್ಚಿನ ಪೆಟ್ಟು ಬಿದ್ದು ತನ್ವೀರ್ ಸೇಠ್ ಜೀವನ್ಮರಣ ಹೋರಾಟ ನಡೆಸಿದ್ದರು. ಹೆಚ್ಚಿನ ಚಿಕಿತ್ಸೆಗೆ ವಿದೇಶಕ್ಕೆ ಮರಳಿ ಯಶಸ್ವಿ ಚಿಕಿತ್ಸೆ ಪಡೆದು ವಾಪಸ್ಸಾಗಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ