Kannada NewsKarnataka NewsLatest

*ಮಹಾನಗರ ಪಾಲಿಕೆಯ ಮಹಿಳಾ ಅಧಿಕಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ*

ಪ್ರಗತಿವಾಹಿನಿ ಸುದ್ದಿ: ರೊಟ್ಟಿ ಅಂಗಡಿಗೆ ಲೈಸೆನ್ಸ್ ನೀಡಲು ಲಂಚಕ್ಕೆ ಕೈಯೊಡ್ಡಿದ್ದ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಮಹಿಳಾ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮಹಾನಗರ ಪಾಲಿಕೆಯ ವಲಯ–1 ಕಚೇರಿಯ ಅಧಿಕಾರಿ ಹೀನಾ ಕೌಸರ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆಯೇ ಹೀನಾ ಕೌಸರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Home add -Advt

ಮಾಳೆಪ್ಪ ತಳವಾರ ಎಂಬುವರು ರೊಟ್ಟಿ ಅಂಗಡಿ ಆರಂಭಿಸಲು ಲೈಸೆನ್ಸ್ ಪಡೆಯಲು ಅರ್ಜಿ ಸಲ್ಲಿಸಿದ್ದರು. ಲೈಸೆನ್ಸ್ ನೀಡಲು ಹೀನಾ ಕೌಸರ್ 4,500 ರೂ. ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಮೊದಲು ಅವರು ಮಾಳೆಪ್ಪರಿಂದ ಮುಂಗಡವಾಗಿ 1,000 ರೂ. ಸ್ವೀಕರಿಸಿದ್ದಾಗಿ ತಿಳಿದುಬಂದಿದೆ. ಇಂದು ಬಾಕಿ 3,500 ರೂ. ಹಣವನ್ನು ಮಾಳೆಪ್ಪ ತಳವಾರರಿಂದ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹೀನಾ ಕೌಸರ್ ಅವರನ್ನು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.


Related Articles

Back to top button