Latest

ಚಿಂಚಲಿ ಜಾತ್ರೆಗೆ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :
ಚಿಂಚಲಿಯ ಶ್ರೀ ಮಾಯಕ್ಕಾದೇವಿ ಜಾತ್ರೆ ನಿಮಿತ್ತ ಫೆ.೧೯ ರಿಂದ ಮಾ.೩ ರವರೆಗೆ ಚಿಕ್ಕೋಡಿ ವಿಭಾಗದ ರಾಯಬಾಗ, ಚಿಕ್ಕೋಡಿ, ಗೋಕಾಕ ಮತ್ತು ಅಥಣಿ ಘಟಕಗಳಿಂದ ವಿಶೇಷ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ.
ರಾಯಬಾಗ ಬಸ್ ನಿಲ್ದಾಣದಲ್ಲಿ, ಮಿರಜ ನಿಯಂತ್ರಣ ಬಿಂದುವಿನಲ್ಲಿ ಹಾಗೂ ಚಿಂಚಲಿ ಶ್ರೀ ಮಾಯಕ್ಕಾದೇವಿ ಜಾತ್ರಾ ಕೇಂದ್ರದಲ್ಲಿ ಪ್ರತ್ಯೇಕ ಜಾತ್ರಾ ನಿಯಂತ್ರಣ ಬಿಂದುಗಳಲ್ಲಿ ನುರಿತ ಸಾರಿಗೆ ನಿಯಂತ್ರಕ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿ ಪ್ರಯಾಣಿಕರಿಗೆ ಸುವ್ಯವಸ್ಥಿತ ವಿಶೇಷ ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ. ಯಾತ್ರಿಕರು ಇದರ ಸದುಪಯೋಗ ಪಡಿಸಿಕೊಳ್ಳಬೆಕೇಂದು ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ಚಿಕ್ಕೊಡಿ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button