ಹೋರಾಟ ಸಮಿತಿಯ ಮುಖಂಡ ಬಿ ಆರ್ ಸಂಗಪ್ಪಗೋಳ ಮಾಹಿತಿ
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ
ಜನೇವರಿ 26ರೊಳಗೆ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಮಾಡದಿದ್ದಲ್ಲಿ ಮುಂದಾಗುವ ಅನಾಹುತಕ್ಕೆ ಸರಕಾರವೇ ಹೊಣೆಯಾಗುತ್ತದೆ ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಎಚ್ಚರಿಸಿದೆ.
ಚಿಕ್ಕೋಡಿಯಲ್ಲಿ ಹೋರಾಟ ಸಮಿತಿಯ ಮುಖಂಡ ಬಿ ಆರ್ ಸಂಗಪ್ಪಗೋಳ ಮಾತನಾಡಿ, ಸರಕಾರದ ಗಮನ ಸೆಳೆಯಲು ಚಿಕ್ಕೋಡಿ ಭಾಗದಲ್ಲಿ ಹಲವು ತಾಲೂಕುಗಳಲ್ಲಿ ಪ್ರತಿಭಟನೆ ನಡೆಸಲಾಗಿದೆ. ಆದರೆ ಕೆಲ ರಾಜಕಾರಣಿಗಳ ಇಚ್ಚಾಶಕ್ತಿ ಕೊರತೆಯಿಂದ ಬೇಡಿಕೆ ಈಡೇರಲಿಲ್ಲ. ಜನೇವರಿ 26 ರೊಳಗೆ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಮಾಡಬೇಕು. ಇಲ್ಲವಾದಲ್ಲಿ ರಸ್ತೆ ತಡೆ, ರೈಲ್ವೆ ತಡೆ ಚಳವಳಿ ಹಮ್ಮಿಕೊಳ್ಳುತ್ತೇವೆ. ಶಾಂತವಾಗಿ ನಡೆಯುತ್ತ್ರುವ ಹೋರಾಟ ಅಶಾಂತಿಗ ತಿರುಗಿದರೆ, ಅನಾಹುತವಾದರೆ ಸಂಸದ ಪ್ರಕಾಶ ಹುಕ್ಕೇರಿ, ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸರಕಾರವೇ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ