Latest

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಸಿವಿಜಿಲ್ ಆಪ್ ಬಿಡುಗಡೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೧೯ ಕ್ಕೆ ಸಂಬಂಧಿಸಿದಂತೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕುರಿತು ದೂರುಗಳನ್ನು ಸಲ್ಲಿಸಿಲು ಸಾರ್ವಜನಿಕರಿಗೆ ಚುನಾವಣಾ ಆಯೋಗವು ಸಿಟಿಜನ್ ವಿಜಿಲ್ ಆಪ್ (ಸಿವಿಜಿಲ್)  ಬಿಡುಗಡೆ ಮಾಡಿದ್ದು, ಸಾರ್ವಜನಿಕರು ಈ ಆಪ್‌ನ್ನು ಗೂಗಲ್ ಪ್ಲೇ ಸ್ಟೋರ್ ಮುಖಾಂತರ ಡೌನಲೋಡ್ ಮಾಡಿಕೊಂಡು ಆಪ್ ಮುಖಾಂತರ ಚುನಾವಣಾ ನೀತಿ ಸಂಹಿತೆ ಕುರಿತು ದೂರುಗಳನ್ನು ಸಲ್ಲಿಸಬಹುದಾಗಿದೆ.
ಅದರಂತೆ ೧೩-ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರ ಒಳಗೊಂಡ ೦೨-ಬೆಳಗಾವಿ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಗೆ ಸಂಬಂಧಪಟ್ಟಂತೆ ತಹಶೀಲ್ದಾರರ ಕಾರ್ಯಲಯ, ರಿಸಾಲ್ದಾರ ಗಲ್ಲಿ, ಬೆಳಗಾವಿಯಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೧೯ಕ್ಕೆ ಸಂಬಂಧಿಸಿದಂತೆ ಸಹಾಯವಾಣಿ ಕೇಂದ್ರವನ್ನು ಪ್ರಾರಂಭಿಸಿದ್ದು ಚುನಾವಣೆಗೆ ಸಂಬಂಧಿಸಿದಂತೆ ಏನಾದರೂ ಮಾಹಿತಿ ಅಥವಾ ದೂರು ಸಲ್ಲಿಸಬೇಕಾದಲ್ಲಿ ದೂರವಾಣಿ ಸಂಖ್ಯೆ ೦೮೩೧-೨೪೦೭೨೮೬ ಕ್ಕೆ ಕರೆಮಾಡಿ ಮಾಹಿತಿ ಅಥವಾ ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿಗಳು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button