ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ತೆರಿಗೆ ವಿನಾಯಿತಿ ಈ ಹಿಂದಿನಿಂದ ಬೇಡಿಕೆ ಇದ್ದರೂ ತಲೆ ಕೆಡಿಸಿಕೊಳ್ಳದ ಬಿಜೆಪಿ ಈಗ ಚುನಾವಣೆಗೋಸ್ಕರ ಗಿಮಿಕ್ ಮಾಡಿದೆ ಎಂದು ರಾಜ್ಯ ಸರಕಾರದ ಮುಖ್ಯಸಚೇತಕ ಗಣೇಶ ಹುಕ್ಕೇರಿ ಟೀಕಿಸಿದ್ದಾರೆ.
ಬಿಜೆಪಿ ಮಂಡನೆ ಮಾಡಿರುವ ಬಜೆಟ್ ಬರುವ ಲೋಕಸಭಾ ಚುನಾವಣೆಯಲ್ಲಿ ಅಸ್ತಿತ್ವ ಉಳಿಸಿಕೊಳ್ಳುವ ಉದ್ದೇಶದಿಂದ ಕೂಡಿದೆಯೇ ಹೊರತು ಜನಸಾಮಾನ್ಯರ ಕಳಕಳಿ ಕಂಡು ಬರುತ್ತಿಲ್ಲ. ದೇಶದ ಅಭಿವೃದ್ಧಿಯ ಉದ್ದೇಶದ ಬಜೆಟ್‌ನಲ್ಲೂ ಚುನಾವಣೆಗೋಸ್ಕರ ರಾಜಕೀಯ ಮಾಡುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ