ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿಯ ಕೆ.ಎಲ್. ಎಸ್. ಗೋಗಟೆ ತಾಂತ್ರಿಕ ಮಹಾವಿದ್ಯಾಲಯ(ಜಿ.ಐ.ಟಿ)ವು ರವಿವಾರ (ಮೇ 26) ಬೆಳಿಗ್ಗೆ 11 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ “ಇಂಜಿನಿಯರಿಂಗ್ ಕೋರ್ಸ್ ಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು” ಹಮ್ಮಿಕೊಂಡಿದೆ.
ಯಾವೆಲ್ಲ ರೀತಿಯ ಇಂಜಿನಿಯರಿಂಗ್ ಕೋರ್ಸ್ ಗಳು ಲಭ್ಯ ಇವೆ, ಅವುಗಳನ್ನು ಆಸಕ್ತಿಗೆ ಅನುಗುಣವಾಗಿ ಹೇಗೆ ಆಯ್ಕೆ ಮಾಡಬೇಕು, ಕಾಲೇಜುಗಳ ಆಯ್ಕೆ ಮಾಡುವಾಗ ಯಾವೆಲ್ಲ ಅಂಶಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು, ಯಾವ ಕೋರ್ಸ್ ಗಳಿಗೆ ಯಾವ ರೀತಿಯ ಅವಕಾಶಗಳು ಇವೆ ಎಂಬ ಅಂಶಗಳ ಬಗ್ಗೆ ಬಹಳ ವಿವರವಾಗಿ ಇಂಜಿನಿಯರಿಂಗ್ ಕೋರ್ಸ್ ಆಕಾಂಕ್ಷಿಗಳಿಗೆ ತಿಳಿಸಿ ಕೊಡಲಿದ್ದಾರೆ. ಇದರ ಜೊತೆಗೆ ಸಿ ಇ ಟಿ / ಕಾಮೆಡ್ ಕೆ ಸೀಟು ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಎಂಬುದನ್ನು ತಿಳಿಸಿಕೊಡಲಿದ್ದಾರೆ.
ಇಂಜಿನಿಯರಿಂಗ್ ಕೋರ್ಸ್ ಗಳ ಆಕಾಂಕ್ಷಿಗಳು ಇದರ ಸದುಪಯೋಗವನ್ನು ತೆಗೆದುಕೊಳ್ಳಬೇಕೆಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ. ಇದು ಸಂಪೂರ್ಣ ಉಚಿತವಾಗಿದ್ದು ವಿದ್ಯಾರ್ಥಿಗಳ ಅನಕೂಲಕ್ಕಾಗಿ ಇದನ್ನು ಹಮ್ಮಿಕೊಳ್ಳಲಾಗಿದೆ. ರವಿವಾರ ದಿನಾಂಕ 26 ಮೇ 2019 ರಂದು ಬೆಳಿಗ್ಗೆ 10:30 ಕ್ಕೆ ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಿಂದ ಕಾಲೇಜು ಬಸ್ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ -9686212703, 7975489088 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ