Latest

ಜುಲೈನಲ್ಲಿ ತೋಪಿನಕಟ್ಟಿ ಶ್ರೀ ಮಹಾಲಕ್ಷ್ಮೀ ಗ್ರುಪ್ ಬೆಳ್ಳಿಹಬ್ಬ

ಪ್ರಗತಿವಾಹಿನಿ ಸುದ್ದಿ, ಖಾನಾಪುರ:
ತಾಲ್ಲೂಕಿನ ತೋಪಿನಕಟ್ಟಿ ಗ್ರಾಮದ ಶ್ರೀ ಮಹಾಲಕ್ಷ್ಮೀ ವಿವಿಧ ಉದ್ದೇಶಗಳ ಸಹಕಾರಿ ಸಂಘ ಜುಲೈ ತಿಂಗಳಲ್ಲಿ 24 ವಸಂತಗಳನ್ನು ಯಶಸ್ವಿಯಾಗಿ ಪೂರೈಸಿ 25ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸಂಘದ ಬೆಳ್ಳಿಹಬ್ಬ ಆಚರಣೆಗೆ ಈಗಿನಿಂದಲೇ ಸಿದ್ಧತೆಗಳು ಪ್ರಾರಂಭಗೊಂಡಿವೆ. 
ತೋಪಿನಕಟ್ಟಿ ಶ್ರೀ ಮಹಾಲಕ್ಷ್ಮೀ ಗ್ರುಪ್ ಸಂಸ್ಥಾಪಕ ವಿಠ್ಠಲ ಹಲಗೇಕರ ಈ ಕುರಿತು ಮಾಹಿತಿ ನೀಡಿದರು.
ಪಟ್ಟಣದಲ್ಲಿ ಶುಕ್ರವಾರ ಆಯೋಜಿಸಿದ್ದ ಬೆಳ್ಳಿಹಬ್ಬ ಆಚರಣೆಯ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಸಂಸ್ಥೆಯ ಬೆಳ್ಳಿಹಬ್ಬದ ಪ್ರಯುಕ್ತ ಇಂದಿನಿಂದ ಅಕ್ಟೋಬರ್ ವರೆಗಿನ ದಸರಾವರೆಗೆ ಸಂಸ್ಥೆಯಲ್ಲಿ ಠೇವಣಿ ಇಡುವ ಗ್ರಾಹಕರಿಗೆ ಆಕರ್ಷಕ ಬಹುಮಾನಗಳನ್ನು ನೀಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಗ್ರಾಹಕರು ಬೆಳ್ಳಿ ಹಬ್ಬದ ವಿಶೇಷ ಠೇವಣಿ ಯೋಜನೆಯ ಲಾಭ ಪಡೆಯಬೇಕು ಎಂದು ಕರೆ ನೀಡಿದರು.
ತೋಪಿನಕಟ್ಟಿ ಗ್ರಾಮದಲ್ಲಿ 1995ರಲ್ಲಿ ಕೇವಲ 30 ಸಾವಿರ ಬಂಡವಾಳದೊಂದಿಗೆ ಪ್ರಾರಂಭಗೊಂಡ ಶ್ರೀ ಮಹಾಲಕ್ಷ್ಮೀ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದು 200 ಕೋಟಿಯಷ್ಟು ವಹಿವಾಟನ್ನು ಹೊಂದಿದೆ. 25 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಸಂಸ್ಥೆ ನಿರಂತರವಾಗಿ ಲಾಭದಲ್ಲಿ ನಡೆದಿದೆ. ಸಂಸ್ಥೆ ಪ್ರಸ್ತುತ ಬೆಳಗಾವಿ, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಒಟ್ಟು 35 ಶಾಖೆಗಳನ್ನು ಹೊಂದಿದ್ದು, ನಾಲ್ಕು ನೂರಕ್ಕೂ ಹೆಚ್ಚು ಸಿಬ್ಬಂದಿ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು
ಅವರು ಸಂಸ್ಥೆ ನಡೆದು ಬಂದ ದಾರಿಯ ಬಗ್ಗೆ ವಿವರಿಸಿದರು.
ಪೂರ್ವಭಾವಿ ಸಭೆಯನ್ನು ಬಿಜೆಪಿ ಮುಖಂಡ ಮತ್ತು ನರೇಂದ್ರ ಮೋದಿ ವಿಚಾರ ಮಂಚ್ನ ರಾಜ್ಯ
ಪ್ರಧಾನ ಕಾರ್ಯದರ್ಶಿ ಶರದ್ ಕೇಶಕಾಮತ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಚಾಂಗಪ್ಪ
ನಿಲಜಕರ, ವಿಠ್ಠಲ ಕರಂಬಳಕರ, ಯಲ್ಲಪ್ಪ ತಿರವೀರ, ಎನ್.ಪಿ ಹಲಗೇಕರ, ಪುಂಡಲೀಕ ಜೋಗೊಜಿ,
ತುಕಾರಾಮ ಸಾವಂತ, ಅಜಿತಕುಮಾರ ಮಂಗಸೂಳಿ ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು, ಆಡಳಿತ
ಮಂಡಳಿಯ ನಿರ್ದೇಶಕರು, ಗ್ರಾಹಕರು ಮತ್ತು ಸಿಬ್ಬಂದಿ ಇದ್ದರು. ಅರುಣ ಕಾಕತಕರ
ಕಾರ್ಯಕ್ರಮ ನಿರ್ವಹಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button