Latest

ಜೆಎನ್‌ಎಂಸಿಯಲ್ಲಿ ವೈದ್ಯಕೀಯ ಪುಸ್ತಕ ಪ್ರದರ್ಶನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಕೆಎಲ್ಇ ಸಂಸ್ಥೆಯ ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯ ಗ್ರಂಥಾಲಯದಲ್ಲಿ ವೈದ್ಯಕೀಯ ಮತ್ತು ದಂತ ವಿಜ್ಞಾನಗಳ ಕುರಿತು ಮೂರು ದಿನಗಳ ಪುಸ್ತಕ ಪ್ರದರ್ಶನ ಆರಂಭವಾಗಿದೆ.
ಪುಸ್ತಕ ಪ್ರದರ್ಶನವನ್ನು ಸಾರ್ವಜನಿಕ ಗ್ರಂಥಾಲಯದ ಉಪನಿರ್ದೇಶಕ ರಾಮಯ್ಯ ಜಿ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಜ್ಞಾನಾರ್ಜನೆಗೆ ಪುಸ್ತಕಗಳು ಬಹಳ ಸಹಕಾರಿಯಾಗಿವೆ. ಪುಸ್ತಕ ಓದುವುದರ ಜೊತೆಗೆ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಪುಸ್ತಕ ಪ್ರದರ್ಶನವು 28ರವರೆಗೆ ನಡೆಯಲಿದೆ. ವೈದ್ಯ ಮತ್ತು ದಂತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ.
ಈ ಸಂದರ್ಭದಲ್ಲಿ ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ‍್ಯ ಡಾ. ಎನ್. ಎಸ್. ಮಹಾಂತಶೆಟ್ಟಿ, ಡಾ. ಅಲ್ಕಾ ಕಾಳೆ, ಡಾ. ಆರ್. ಎಸ್. ಮುಧೋಳ, ಡಾ. ಹೊಗಾಡೆ, ಡಾ. ವಿ. ಎಂ. ಪಟ್ಟಣಶೆಟ್ಟಿ, ರವಿ ಶಿವನಾಯ್ಕರ ಮುಂತಾದವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button