Latest

*ಸಿಡಿಲು ಬಡಿದು ವಿದ್ಯಾರ್ಥಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುತ್ತಿದ್ದು, ಸಿಡಿಲು ಬಡಿದು ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

Home add -Advt

ಉಡುಪಿಯ ಕಾಪು ತಾಲೂಕಿನ ಶಿರ್ವ ಪಂಚಾಯತ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ರಕ್ಷಿತ್ ಪೂಜಾರಿ ಎಂದು ಗುರುತಿಸಲಾಗಿದೆ. ಈತ ಶಿರ್ವ ಎಂಎಸ್ ಆರ್ ಎಸ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಸಿಎ ಓದುತಿದ್ದ.

ಸ್ನಾನ ಮಾಡಲೆಂದು ಬಚ್ಚಲು ಮನೆಬಳಿ ನಿಂತಿದ್ದ ವೇಳೆ ಏಕಾಏಕಿ ಸಿಡಿಲು ಅಪ್ಪಳಿಸಿದ್ದು, ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದೆ. ತಕ್ಷಣ ಆತನನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾನೆ.


Related Articles

Back to top button