Latest

ಜ. 27 ರಂದು ಬೆಳಗಾವಿಯಲ್ಲಿ ಉದ್ಯೋಗ ಮೇಳ

     ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜನವರಿ 27 ರಂದು ಮುಂಜಾನೆ 9.30 ರಿಂದ ಮಧ್ಯಾಹ್ನ 3.30 ಗಂಟೆ ವರೆಗೆ ನಗರದ ಕೆ.ಎಲ್.ಎಸ್. ಗೋಗಟೆ ಇನ್ಸ್ಟಿಟ್ಯುಟ್ ಆಫ್ ಟೆಕ್ನಾಲಜಿ ಉದ್ಯಮಭಾಗದಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಎಸ್.ಎಸ್.ಎಲ್.ಸಿ. ಉತ್ತೀರ್ಣ, ಪಿಯುಸಿ, ಐಟಿಐ, ಡಿಪ್ಲೋಮಾ, ಫಾರ್ಮಸಿ, ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಈ ಮೇಳದಲ್ಲಿ ವಿಕಲಚೇತನರಿಗೂ ಉದ್ಯೋಗಾವಕಾಶವಿದೆ, ಪ್ರತಿಷ್ಠಿತ ಖಾಸಗಿ ಕಂಪನಿಗಳು ಬರಲಿದ್ದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಛೇರಿಗೆ ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 8951911567, 9743166178 ಸಂಪರ್ಕಿಸಲು ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button