Kannada NewsKarnataka NewsLatest

ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಭೂಮಿ ಪೂಜೆ ಸಲ್ಲಿಸಿದ ಶಾಸಕ ಅನಿಲ ಬೆನಕೆ

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –  ಶಾಸಕ ಅನಿಲ ಬೆನಕೆ  ಬೆಳಗಾವಿ ಉತ್ತರ ಮತಕ್ಷೇತ್ರದ  ಅಶೋಕ ನಗರದ ಕ್ರೀಡಾ ಸಂಕೀರ್ಣದಲ್ಲಿ ಟೆನ್ನಿಸ್ ಕೋರ್ಟ್, ವ್ಹಾಲಿಬಾಲ್ ಕೊರ್ಟ್, ಬೇಜಿ ಪೂಲ್, ಟೆಬಲ್ ಟೆನ್ನಿಸ್, ಬಾಸ್ಕೆಟ್ ಬಾಲ್, ಮಿನಿ ಸ್ವಿಮ್ಮಿಂಗ್ ಪೂಲ್ ಹಾಗೂ ಇತರ ಕ್ರೀಡಾ ಚಟುವಟಿಕೆಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಬೆಳಗಾವಿ ಮಹಾನಗರ ಪಾಲಿಕೆಯ  80 ಲಕ್ಷ ರೂ.ಗಳ ಅನುದಾನದಡಿಯಲ್ಲಿ ಈ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಬೆಳಗಾವಿಯಲ್ಲಿನ ಕ್ರೀಡಾ ಪ್ರೇಮಿಗಳ ಉಪಯೋಗಕ್ಕಾಗಿ ನೀಡಲಾಗುವುದು ಹಾಗೂ ಬೆಳಗಾವಿಯ ಸಮಗ್ರ ಅಭಿವೃದ್ಧಿಯನ್ನು ಸಾಧಿಸಲು ಎಲ್ಲ ಅಧಿಕಾರಿಗಳು ಕೈಜೋಡಿಸಬೇಕೆಂದರು.

ಅದರಂತೆಯೇ ಮಹಾನಗರ ಪಾಲಿಕೆ ವತಿಯಿಂದ ಕ್ಷೇತ್ರದಲ್ಲಿ ಇನ್ನೂ ಅನೇಕ ಕಾಮಗಾರಿಗಳನ್ನು ಕೈಗೊಂಡು ಅವುಗಳನ್ನು ಅನುಷ್ಠಾನಗೊಳಿಸಿ ಸಾರ್ವಜನಿಕರ ಹಿತ ಕಾಪಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ  ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಅಮಲಾನ್ ಆದಿತ್ಯ ಬಿಸ್ವಾಸ್, ಮಹಾನಗರ ಪಾಲಿಕೆ ಆಯುಕ್ತ ಜಗದೀಶ ಕೆ. ಹೆಚ್, ಕೆ.ಆರ್.ಆಯ್.ಡಿ.ಎಲ್‌ನ ಕಾರ್ಯನಿರ್ವಾಹಕ ಅಭಿಯಂತರರು ಮತ್ತು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Home add -Advt

Related Articles

Back to top button