ಪ್ರಗತಿವಾಹಿನಿ ಸುದ್ದಿ, ಖಾನಾಪುರ
ಕರ್ನಾಟಕ ಗೋವಾ ಗಡಿಯ ಚೋರ್ಲಾ ಘಾಟ್ ನಲ್ಲಿ ಗುರುವಾರ ಮಹಾರಾಷ್ಟ್ರ ನೊಂದಣಿಯ ಕಾರು ಎದುರಿನಿಂದ ಬಂದ ಮತ್ತೊಂದು ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದು ರಸ್ತೆ ಅಪಘಾತ ಸಂಭವಿಸಿದೆ.

ಅಪಘಾತದ ಬಳಿಕ ಎರಡೂ ಕಾರುಗಳು ರಸ್ತೆ ಪಕ್ಕದ ಕಂದಕದಲ್ಲಿ ಮಗುಚಿ ಬಿದ್ದಿವೆ. ಈ ಸಂದರ್ಭದಲ್ಲಿ ಕಾರಿನ ಇಂಧನ ಸೋರಿ ಬೆಂಕಿ ಹತ್ತಿದೆ. ಬೆಂಕಿಯ ರಭಸಕ್ಕೆ ಎರಡೂ ಕಾರುಗಳು ಸುಟ್ಟಿವೆ. (car 1. Audi MH 01 AL 9639, car no 2. MH 03AM 8782). ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ.
ವಾಳಪೈ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಗ್ನಿಶಾಮಕ ವಾಹನ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದೆ. ಅಪಘಾತದ ಪರಿಣಾಮ ಈ ಮಾರ್ಗದಲ್ಲಿ ಸಂಚಾರ ದಟ್ಟಣೆ ಉಂಟಾಗಿ ಪ್ರಯಾಣಿಕರು ಪರದಾಡಿದರು.
(ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಪರಿಚಿತರಿಗೆ, ಗ್ರುಪ್ ಗಳಿಗೆ ಶೇರ್ ಮಾಡಿ)